Fri,Apr26,2024
ಕನ್ನಡ / English

ರಾಜ್ಯದಲ್ಲಿ ಭಾರೀ ಮಳೆ: ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಹದಿಂದ 81 ಗ್ರಾಮಗಳಿಗೆ ಹಾನಿ | ಜನತಾ ನ್ಯೂಸ್

25 Jul 2021
2596

ಉತ್ತರಕನ್ನಡ : ಧಾರಾಕಾರವಾಗಿ ಸುರಿದ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ನದಿಗಳು ಉಕ್ಕಿ ಹರಿದು ಸೃಷ್ಟಿಸಿದ ಪ್ರವಾಹದಿಂದ ಈ ಬಾರಿ ದೊಡ್ಡ ಮಟ್ಟದಲ್ಲಿಯೇ ಹಾನಿ ಸಂಭವಿಸಿದೆ. ಪ್ರವಾಹದಿಂದ 81 ಗ್ರಾಮಗಳಿಗೆ ಹಾನಿಯಾಗಿದೆ. 12,600 ಜನರು ನೆರೆಯಿಂದ ಬಾಧಿತರಾಗಿದ್ದಾರೆ ಎಂದು ಕಾರವಾರದಲ್ಲಿ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕದ್ರಾ ಜಲಾಶಯ ವ್ಯಾಪ್ತಿಯಲ್ಲಿ ಸಾಲುಸಾಲು ಮನೆಗಳು ಕುಸಿದಿವೆ. ಕದ್ರಾ ಜಲಾಶಯ ವ್ಯಾಪ್ತಿಯ ಗಾಂಧಿನಗರದಲ್ಲಿ 15ಕ್ಕೂ ಹೆಚ್ಚು ಮನೆಗಳು ನೆಲಸಮ ಆಗಿವೆ. ಜಲಾಶಯದಿಂದ 2 ಲಕ್ಷ ಕ್ಯೂಸೆಕ್ಸ್ ನೀರು ಬಿಟ್ಟ ಪರಿಣಾಮ ಮನೆಗಳು ಕುಸಿದಿವೆ.

janata

ಕಳೆದ ಮೂರು ದಿನಗಳಿಂದ ಜಿಲ್ಲೆಯ ಘಟ್ಟದ ಮೇಲೆ ಹಾಗೂ ಕರಾವಳಿ ತಾಲೂಕಿನಲ್ಲಿ ಸುರಿದ ಮಳೆಯಿಂದ ಪ್ರವಾಹ ಸೃಷ್ಟಿಯಾಗಿ ಸಾಕಷ್ಟು ಅನಾಹುತಕ್ಕೆ ಕಾರಣವಾಗಿದೆ. ಅದರಲ್ಲೂ ಕಾಳಿ, ಗಂಗಾವಳಿ, ಅಘನಾಶಿನಿ ನದಿ ರೌದ್ರಾವತಾರ ತಾಳಿದ್ದರಿಂದ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ಅಂಕೋಲಾ, ಯಲ್ಲಾಪುರ, ಕಾರವಾರ, ಶಿರಸಿ, ಸಿದ್ದಾಪುರ ತಾಲೂಕುಗಳು ಅಕ್ಷರಶಃ ನಲುಗಿವೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಹದಿಂದ 81 ಗ್ರಾಮಗಳಿಗೆ ಹಾನಿಯಾಗಿದೆ. 12,600 ಜನರು ನೆರೆಯಿಂದ ಬಾಧಿತರಾಗಿದ್ದಾರೆ ಎಂದು ಕಾರವಾರದಲ್ಲಿ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ. ಯಲ್ಲಾಪುರ, ಶಿರಸಿ, ಸಿದ್ಧಾಪುರ ಹಾಗೂ ಹೊನ್ನಾವರದಲ್ಲಿ ತಲಾ ಓರ್ವರು ಸಾವನ್ನಪ್ಪಿದ್ದಾರೆ.

janata

ಅಂಕೋಲಾದಲ್ಲಿ 2, ಯಲ್ಲಾಪುರದಲ್ಲಿ ಓರ್ವ ಸೇರಿ 3 ಮಂದಿ ಕಣ್ಮರೆಯಾಗಿದ್ದಾರೆ. 50 ಮನೆಗಳು ಪೂರ್ಣ, 146 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಜಿಲ್ಲೆಯಾದ್ಯಂತ 94 ಕಾಳಜಿ ಕೇಂದ್ರಗಳಲ್ಲಿ 9,655 ಮಂದಿ ನಿರಾಶ್ರಿತರಿಗೆ ಆಶ್ರಯ ನೀಡಲಾಗಿದೆ. ಪ್ರವಾಹದಿಂದಾಗಿ 28 ಸೇತುವೆ ಹಾಗೂ ಕಾಲುಸಂಕಗಳಿಗೆ ಹಾನಿ ಆಗಿದೆ. ನೆರೆಯಿಂದಾಗಿ 148.2 ಕಿಲೋ ಮೀಟರ್ ರಸ್ತೆಗಳಿಗೆ ಹಾನಿ ಉಂಟಾಗಿದೆ.

15214 ಜನರನ್ನು ಕಾಳಜಿ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 132 ಕಾಳಜಿ ಕೇಂದ್ರದಲ್ಲಿ 15077 ಜನರು ತಂಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರವಾಹಕ್ಕೆ ಸಿಲುಕಿ 43 ಜಾನವಾರು ಸಾವನ್ನಪ್ಪಿದ್ದು, 912.88 ಹೆಕ್ಟೇರ್ ಕೃಷಿ ಭೂಮಿ ಹಾಗೂ 61 ಹೆಕ್ಟೇರ್ ತೋಟಗಾರಿಕಾ ಭೂಮಿಗೆ ಹಾನಿ ಸಂಭವಿಸಿದೆ.

janata

RELATED TOPICS:
English summary :Uttara kannada

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...