Sun,May19,2024
ಕನ್ನಡ / English

ಮುಂಗಾರು ಅಧಿವೇಶನ : ಕಲಾಪಕ್ಕೆ ಗೈರು, ಅಡ್ಡಿಪಡಿಸುವ ಪ್ರತಿಪಕ್ಷಗಳನ್ನು ಬಯಲಿಗೆಳೆಯಲು ಪ್ರಧಾನಿ ಮೋದಿ ಕರೆ | ಜನತಾ ನ್ಯೂಸ್

27 Jul 2021
2262

ನವದೆಹಲಿ : ಮುಂಗಾರು ಅಧಿವೇಶನದಲ್ಲಿ ವ್ಯವಹಾರವನ್ನು ಸ್ಥಗಿತಗೊಳಿಸುವ ಪ್ರತಿಪಕ್ಷಗಳ ಪ್ರಯತ್ನಗಳ ಕುರಿತು ಬಿಜೆಪಿ ಸಂಸದೀಯ ಪಕ್ಷದ ಸಭೆ ಸಂಸತ್ತಿನಲ್ಲಿ ನಡೆದಿದೆ. ಕಳೆದ ವಾರದಿಂದ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ನೇತ್ರತ್ವದ ಪ್ರತಿಪಕ್ಷಗಳು ಪೆಗಾಸಸ್ ಕದ್ದಾಲಿಕೆ ಪ್ರಸ್ತಾಪಿಸಿ ಸದನದ ಕಲಾಪಗಳಿಗೆ ಅಡ್ಡಿ ಮುಂದುವರೆಸಿರುವುದರ ಬೆನ್ನಲ್ಲೇ ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮತ್ತು ಇತರ ಬಿಜೆಪಿ ಮುಖಂಡರು ಬಿಜೆಪಿ ಸಂಸದೀಯ ಪಕ್ಷದ ಸಭೆಗಾಗಿ ಸಂಸತ್ತನ್ನು ತಲುಪುತ್ತಾರೆಯಲ್ಲಿ ಪಾಲ್ಗೊಂಡರು.

ಕಳೆದ ವಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಏನಾಯಿತು ಎಂಬುದರ ಕುರಿತು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ವಿ.ಮುರಲೀಧರನ್ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ವಿವರಿಸಿದ ನಂತರ, ಮಾತನಾಡಿದ ಪ್ರಧಾನಿ ಮೋದಿ ಅವರು, ಪ್ರತಿಪಕ್ಷಗಳ ಅನುಸರಿಸುತ್ತಿರುವ ತಾವು ಸಭೆಗಳಿಗೆ ಬರುವುದಿಲ್ಲ ಹಾಗೂ ಯಾವುದೇ ವ್ಯವಹಾರವನ್ನು ನಡೆಸಲು ಸದನಕ್ಕೆ ಅವಕಾಶ ನೀಡುವುದಿಲ್ಲ ಎಂಬ ದೋರಣೆಗಳನ್ನು ದೇಶದ ಜನತೆಯ ಮುಂದೆ ಬಹಿರಂಗಪಡಿಸುವಂತೆ, ಪಕ್ಷದ ಸಂಸದರನ್ನು ಕೇಳಿದರು.

ಪೆಗಾಸಸ್ ಪ್ರಾಜೆಕ್ಟ್ ವರದಿಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷದ ಸಂಸದರು ರಾಜ್ಯಸಭೆಯಲ್ಲಿ ಘೋಷಣೆ ಮುಂದುವರಿಸಿದ್ದಾರೆ. ಪೆಗಾಸಸ್ ಪ್ರಾಜೆಕ್ಟ್ ವರದಿಯ ಕುರಿತು ಚರ್ಚೆಗೆ ಪ್ರತಿಪಕ್ಷ ಸಂಸದರು ಘೋಷಣೆಗಳ ಕೂಗಾಟದ ಮಧ್ಯೆ ರಾಜ್ಯಸಭೆಯನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು.

ಮುಂಗಾರು ಅಧಿವೇಶನದ ಉಳಿದ ಕಲಾಪಗಳಲ್ಲಿ ಸದನವನ್ನು ಕಾರ್ಯನಿರ್ವಹಿಸಲು ಅನುಮತಿಸದಿರಲು ಸದನದ ಕೆಲವು ವಿಭಾಗಗಳು ನಿರ್ಧರಿಸುತ್ತಿವೆ, ಎಂಬ ಮಾಧ್ಯಮ ವರದಿಗಳ ಬಗ್ಗೆ ನನಗೆ ಕಳವಳ ಇದೆ. ಸಂಸತ್ತು ಕಾನೂನುಗಳನ್ನು ರೂಪಿಸಲು ಮತ್ತು ಸಾರ್ವಜನಿಕ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಿದೆ. ಪಕ್ಷಗಳ ಮುಖಂಡರು ಈಗ ನಡೆಯುತ್ತಿರುವ ವಿಷಾದಕರ ಸ್ಥಿತಿಗತಿಗಳ ಬಗ್ಗೆ ಮತ್ತು ಸಾರ್ವಜನಿಕ ಕಾಳಜಿಯ ಸಮಸ್ಯೆಗಳನ್ನು ಎತ್ತಿಕೊಳ್ಳುವುದರಿಂದ ವಂಚಿತರಾಗಿದ್ದಕ್ಕಾಗಿ, ತಮ್ಮ ಕಳವಳವನ್ನು ನನಗೆ ವ್ಯಕ್ತಪಡಿಸಿದ್ದಾರೆ. ಈ ಮನೋಭಾವವನ್ನು(ಗದ್ದಲ ಸೃಷ್ಟಿಸುವ) ಪುನರ್ವಿಮರ್ಶಿಸುವಂತೆ ನಿಮ್ಮೆಲ್ಲರಿಗೂ ಮನವಿ ಮಾಡುತ್ತೇನೆ, ಎಂದು ಕಲಾಪವನ್ನು ಮುಂದೂಡುವ ಮೊದಲು ರಾಜ್ಯಸಭೆ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಮನವಿ ಮಾಡಿಕೊಂಡಿದ್ದಾರೆ.

ಇದೆ ರೀತಿ ಪ್ರತಿಪಕ್ಷದ ಸಂಸದರು ಸದನದಲ್ಲಿ ಘೋಷಣೆ ಹಾಗೂ ಮಾಡಿದ ಸದ್ದುಗದ್ದಲಗಳ ಮಧ್ಯೆ ಲೋಕಸಭೆಯನ್ನು ಬೆಳಿಗ್ಗೆ 11.45 ಕ್ಕೆ ಮುಂದೂಡಲಾಯಿತು.

RELATED TOPICS:
English summary :Mansoon session : PM Modi urged party MPs to expose opposition

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...