Thu,May09,2024
ಕನ್ನಡ / English

ರಾಜ್ಯದ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ: ಸಿದ್ದರಾಮಯ್ಯ | ಜನತಾ ನ್ಯೂಸ್

27 Jul 2021
2627

ಬೆಳಗಾವಿ : ಯಡಿಯೂರಪ್ಪ ಅವರು ಶಾಸಕರ ಬೆಂಬಲದ ಮೇಲೆ ಮುಖ್ಯಮಂತ್ರಿ ಆದವರು. ಅವರನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ದಾರೆ. ಅವರ ಹೈಕಮಾಂಡ್‌ನವರು ಶಾಸಕರ ಅಭಿಪ್ರಾಯ ಕೇಳಿದರೇ? ಮುಂದಿನ ಮುಖ್ಯಮಂತ್ರಿ ಆಯ್ಕೆಯ ಹಕ್ಕು ಕೂಡ ಆ ಶಾಸಕರಿಗಿಲ್ಲ. ಬಿಜೆಪಿ ಶಾಸಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ? ಅವರ ಮಾತಿಗೆ ಕಿಮ್ಮತ್ತಿಲ್ಲ. ಹೈಕಮಾಂಡ್ ಮಾತಿಗೆ ಸುಮ್ಮನೆ ತಲೆ ಆಡಿಸಬೇಕಷ್ಟೆ. ಅವರು ಯಾರನ್ನು ಬೇಕಾದರೂ ಅಧಿಕಾರದಿಂದ ಕಿತ್ತು ಹಾಕಬಹುದು, ಇಷ್ಟ ಬಂದವರನ್ನು ಕುರ್ಚಿಯಲ್ಲಿ ಕೂರಿಸಬಹುದು ಎಂದು ವ್ಯಂಗ್ಯವಾಡಿದರು.

ರಾಷ್ಟ್ರೀಯ ಪಕ್ಷ ಅಂದ ಮೇಲೆ ಹೈಕಮಾಂಡ್ ಇರುವುದು ಸಹಜ. ಆದರೆ, ರಾಜ್ಯದ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ ಎಂದರು.

ಈಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ, ಮಂತ್ರಿ ಮಂಡಲವೇ ಇಲ್ಲದ ಮೇಲೆ ಜನರ ಕಷ್ಟಗಳನ್ನು ಕೇಳುವವರು ಯಾರು? ಬಿಜೆಪಿಯವರಿಗೆ ಜನರ ಜೀವಕ್ಕಿಂತ ಅಧಿಕಾರ ಹಸ್ತಾಂತರವೇ ಮುಖ್ಯವಾಯಿತೇ ಎಂದು ಪ್ರಶ್ನಿಸಿದರು.

25 ತಾರೀಖು ಆದ ಬಳಿಕ ಒಂದು ಗಂಟೆ ಕೂಡಾ ಅಧಿಕಾರದಲ್ಲಿ ಇರಬಾರದು ಅಂತ ಯಡಿಯೂರಪ್ಪ ಅವರಿಗೆ ಸೂಚನೆ ನೀಡಲಾಗಿತ್ತು. ಅದಕ್ಕೆ ಯಡಿಯೂರಪ್ಪ ಅವರಿಗೆ 26ರಂದು ತಾವು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಬಗ್ಗೆ ಮೊದಲೆ ಗೊತ್ತಿತ್ತು. ಆದರೆ ಈ ಭಾಗದ ನಿರಾಶ್ರಿತರ ಮುಂದೆ ಸುಳ್ಳು ಹೇಳಲು ಯುಡಿಯೂರಪ್ಪ ಇಲ್ಲಿಗೆ ಬಂದಿದ್ದರು. ಯಾಕೆ ಇಲ್ಲಿ ಬಂದು ನಿರಾಶ್ರಿತರಿಗೆ ಸುಳ್ಳು ಹೇಳುಬೇಕಾಗಿತ್ತು ಎಂದು ಕುಟುಕಿದರು.

ಬಿಜೆಪಿಯವರು ಸುಳ್ಳು ಹೇಳುವದರಲ್ಲಿ ಬಹಳ ನಿಸ್ಸೀಮರು. ರಾಜ್ಯದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಪರಿಹಾರ ನೀಡುವಲ್ಲಿ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ. ಈ ಕುರಿತು ಸದನದಲ್ಲಿ ಪ್ರಸ್ತಾಪ ಮಾಡುವದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

RELATED TOPICS:
English summary :Siddaramaiah

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...