Thu,Apr25,2024
ಕನ್ನಡ / English

ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂಸ್

30 Jul 2021
2169

ಚಾಮರಾಜನಗರ : ಬಿ ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೊಂದು ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಬೊಮ್ಮಲಾಪುರದ ಯುವಕ ಅಭಿಮಾನಿ ರವಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಾಂತ್ವನ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರಕ್ಕೆ ತೆರಳಿದ್ದು, ಆತ್ಮಹತ್ಯೆಗೆ ಶರಣಾದ ಅಭಿಮಾನಿ ಕುಟುಂಬಕ್ಕೆ ಸಾಂತ್ವನ ಹೇಳಿ ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ 5 ಲಕ್ಷ ರೂ. ನೀಡಿ. ಇನ್ನೂ 5 ಲಕ್ಷ ರೂ. ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.

ರವಿ ಕುಟುಂಬವನ್ನು ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, "ಪಕ್ಷವನ್ನು ಬಲಪಡಿಸಲು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ" ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಡ್ಡಾರಿಗೆ ಇದು ನಾನು ನೀಡಿರುವ ಭರವಸೆ. ಗಣೇಶ ಚತುರ್ಥಿ ಬಳಿಕ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಪ್ರತಿ ವಾರ ಒಂದು ಜಿಲ್ಲೆಗೆ ಹೋಗಿ ಸಂಘಟನೆ ಬಲಪಡಿಸುವೆ. ನನ್ನ ಕಣ್ಣೆದುರೇ ಯೋಗ್ಯ ವ್ಯಕ್ತಿಯನ್ನು ಬೆಳೆಸಬೇಕೆಂಬ ಉದ್ದೇಶವಿದೆ. ಬೊಮ್ಮಾಯಿರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಸಂಯಮ ಕಳೆದುಕೊಂಡು ಮಾತನಾಡ್ತಿದ್ದಾರೆ. ಅವರಿಗೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ ಎಂದರು.

ಸಿಎಂ ಬೊಮ್ಮಾಯಿಯವರು ದೆಹಲಿಯಿಂದ ಬಂದ ನಂತರ ಸಟಿವ ಸಂಪುಟ ಸದಸ್ಯರ ರಚನೆ ಬಗ್ಗೆ ಚರ್ಚಿಸಿ ದೆಹಲಿ ವರಿಷ್ಠರ ತೀರ್ಮಾನ ಮತ್ತು ಒಪ್ಪಿಗೆ ಪಡೆದು ಶೀಘ್ರವೇ ರಚನೆ ಮಾಡುತ್ತಾರೆ, ವಲಸಿಗ ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವ ಕುರಿತು ಸಹ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಚಿವ ಸಂಪುಟ ರಚನೆಯಲ್ಲಿ ನಾನು ಮಧ್ಯೆ ಪ್ರವೇಶಿಸುವುದಿಲ್ಲ. ಉತ್ತಮ ಆಡಳಿತ ನಿರ್ವಹಿಸುವ ಬಗ್ಗೆ ಸಲಹೆ ಕೊಡುತ್ತೇನಷ್ಟೆ ಹೊರತು ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

RELATED TOPICS:
English summary :Chamarajanagar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...