Sun,May19,2024
ಕನ್ನಡ / English

ಕೋಟ್ಯಂತರ ರೂ. ಮೌಲ್ಯದ ಮನೆ ನಿರ್ಮಾಣ ಆರೋಪ: ತನಿಖೆಗೆ ಆಗ್ರಹಿಸಿ ಲೋಕಾಯುಕ್ತರಿಗೆ ದೂರು ನೀಡಿದ ಕೋಟ ಶ್ರೀನಿವಾಸ ಪೂಜಾರಿ | ಜನತಾ ನ್ಯೂಸ್

30 Jul 2021
2899

ಉಡುಪಿ : ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ "ಸರಳ, ಸಜ್ಜನ, ಪ್ರಾಮಾಣಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಆರು ಕೋಟಿ ರೂ. ವೆಚ್ಚದ ಗುಡಿಸಲು" ಎಂಬ ಬರಹವು ಅವರ ಮನೆಯ ಫೋಟೋದೊಂದಿಗೆ ವೈರಲ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಈ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಜು.30ರಂದು ಮನವಿ ಸಲ್ಲಿಸಿದ್ದಾರೆ.

ತಮ್ಮ ಮನೆ ನಿರ್ಮಾಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುತ್ತಿರುವ ಆಪಾದನೆ ಬಗ್ಗೆ ಸ್ವತಃ ಕೋಟ ಶ್ರೀನಿವಾಸ ಪೂಜಾರಿಯವರೇ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.

ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದ ಸರ್ವೆ ನಂ.202/2ಡಿ 1ಸಿ 4ರ 13 ಸೆಂಟ್ಸ್ ಜಾಗವನ್ನು ಸ್ವಂತ ಆದಾಯದಿಂದ ಖರೀದಿಸಿದ್ದು, ಇಲ್ಲಿ ಗ್ರಾಪಂ ಪರವಾನಿಗೆ ಪಡೆದು ಮನೆ ಕಟ್ಟುತ್ತಿದ್ದೇನೆ. ನನ್ನ ಈಗಿನ ವಾಸ್ತವ್ಯದ ಮನೆ ಸರ್ವೋಚ್ಛ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಉಳಿದಿದೆ.

ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದ 5 ಗುಂಟೆ ಜಮೀನು ನನ್ನ ಸ್ವಂತ ಆದಾಯದಿಂದ ಖರೀದಿಯಾಗಿದ್ದು, ಸದರಿ ಜಾಗದಲ್ಲಿ ಗ್ರಾಪಂ ಪರವಾನಿಗೆ ಪಡೆದು ಮನೆ ಕಟ್ಟುತ್ತಿದ್ದೇನೆ. ಇದಕ್ಕೆ ಸುಮಾರು 60 ಲಕ್ಷ ರೂ. ವೆಚ್ಚವಾಗಿದೆ. ಇದಕ್ಕಾಗಿ ಅಪೆಕ್ಸ್ ಬ್ಯಾಂಕ್​​​ನಲ್ಲಿ ಎರಡು ವರ್ಷಗಳ ಹಿಂದೆ 35 ಲಕ್ಷ ರೂ. ಸಾಲ ಪಡೆದಿದ್ದೇನೆ.

ಇದನ್ನು ನನ್ನ ಸಂಬಳ ಮತ್ತು ಗೌರವಧನದ ಮೂಲಕ ಸಾಲ ಚುಕ್ತಾ ಮಾಡಿದ್ದೇನೆ. ಇನ್ನು, ಇದಕ್ಕೆ ಕಡಿಮೆಯಾದ ಮೊತ್ತಕ್ಕೆ ಬ್ರಹ್ಮಾವರದ ಎಸ್​​ಬಿಐ ಶಾಖೆಯಲ್ಲಿ 40 ಲಕ್ಷ ರೂ. ಸಾಲ ಮಾಡಿದ್ದೇನೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಸರಳ ಹಾಗೂ ಸಜ್ಜನರಾದವರು 13 ಸೆಂಟ್ಸ್‌ ಜಾಗದಲ್ಲಿ ₹6 ಕೋಟಿ ವೆಚ್ಚದಲ್ಲಿ ಗುಡಿಸಲು ನಿರ್ಮಾಣ ಮಾಡುತ್ತಿದ್ದಾರೆ ಎಂದೆಲ್ಲ ಅಪಪ್ರಚಾರ ಮಾಡಲಾಗುತ್ತಿದೆ.

ಸ್ವಂತ ಆದಾಯದಿಂದ 13 ಸೆಂಟ್ಸ್‌ ಜಾಗ ಖರೀದಿಸಿ ಗ್ರಾಮ ಪಂಚಾಯತ್‌ನಿಂದ ಪರವಾನಿಗೆ ಪಡೆದು ಮನೆ ಕಟ್ಟಿಸುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆಗೆ ಮಹತ್ವ ನೀಡುತ್ತ ಬಂದಿದ್ದೇನೆ. ಶಾಸಕನಾದಾಗಿನಿಂದ ಈವರೆಗೂ ಪಡೆದಿರುವ ವೇತನ, ಗೌರವಧನ, ಆರ್ಥಿಕ ನೆರವು ಹಾಗೂ ಮಗನ ಉದ್ದಿಮೆಯಿಂದ ಬಂದ ಆದಾಯವನ್ನು ಪರಿಗಣಿಸಿ, ಆದಾಯಕ್ಕಿಂತ ಮನೆಯ ನಿರ್ಮಾಣದ ವೆಚ್ಚ ಹೆಚ್ಚಾಗಿರುವುದು ಕಂಡು ಬಂದರೆ ನನ್ನ ವಿರುದ್ಧವೂ ಕ್ರಮಕೈಗೊಳ್ಳಬೇಕು.

ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ದುರುದ್ದೇಶಪೂರಿತ ಆರೋಪ ಮಾಡಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಲೋಕಾಯುಕ್ತ ವಿಶ್ವನಾಥ ಶೆಟ್ಟಿಯವರಿಗೆ ಮನವಿ ಮಾಡಿದ್ದಾರೆ.

janata

RELATED TOPICS:
English summary :Kota Srinivas Poojary

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...