ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂಸ್
ಚಿಕ್ಕಮಗಳೂರು : 2022ರ ಮಾರ್ಚ್ನಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಆಗ್ತಾರೆ ಎಂದು ವೆಂಕಪ್ಪಯ್ಯ ಒಡೆಯರ್ ನುಡಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಮುಖ್ಯಮಂತ್ರಿ ಆಗಬೇಕು ಎಂಬ ಕಾರಣಕ್ಕೆ ನಾನು ಗಡ್ಡಬಿಟ್ಟಿದ್ದಲ್ಲ, ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡಬಿಟ್ಟಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ ಮೈಲಾರಲಿಂಗರ ಭವಿಷ್ಯದ ಬಗ್ಗೆ ಗೊತ್ತಿಲ್ಲ. ಅವರು ಹೇಳಿರುವುದು ನಿಜವಾದರೆ ಮುಖ್ಯಮಂತ್ರಿ ಆಗುವ ಆಕಾಂಕ್ಷೆ ಇರುವವರೆಲ್ಲರೂ ಗಡ್ಡ ಬಿಡಲು ಪ್ರಾರಂಭಿಸಬಹುದು ಎಂದು ಉತ್ತರಿಸಿದರು.
ಇನ್ನು ನನಗೆ ಕಾಲೇಜು ದಿನಗಳಿಂದಲೂ ಗಡ್ಡ ಬಿಡುವ, ಹಣೆಗೆ ಕುಂಕುಮ ಇಡುವ, ಕಿವಿಗೆ ಟಿಕ್ಕಿ ಹಾಕುವ ಹವ್ಯಾಸ ಇದೆ. ಗಡ್ಡ ಬಿಟ್ಟಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಡಿ. ನನ್ನನ್ನು ನೋಡಿದಾಕ್ಷಣ ಸಿಟಿ ರವಿ ಎಂಬುದು ಗೊತ್ತಾಗಲಿ ಎಂದೇ ನಾನು ಹೀಗಿರುವೆ ಎಂದು ಸಿ.ಟಿ.ರವಿ ಸ್ಪಷ್ಟನೆ ಕೊಟ್ಟರು.