Mon,May13,2024
ಕನ್ನಡ / English

ಬೆಳ್ಳಂಬೆಳಗ್ಗೆ ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲೆ ಇಡಿ ದಾಳಿ! | ಜನತಾ ನ್ಯೂಸ್

05 Aug 2021
2528

ಬೆಂಗಳೂರು : ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ದಾಳಿ ನಡೆಸಿದ್ದಾರೆ. ಬೆಂಗಳೂರಿನ ಶಿವಾಜಿ ನಗರದಲ್ಲಿರುವ ರೋಷನ್ ಬೇಗ್ ಮನೆಯ ಮೇಲೆ ED ದಾಳಿ ನಡೆದಿದೆ. ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಐಎಂಎ ಸಕ್ಷಮ ಪ್ರಾಧಿಕಾರ ಮುಖ್ಯಸ್ಥ ಈ ಹಿಂದೆ ಸರ್ಕಾರಕ್ಕೆ ಅನುಮತಿ ಕೋರಿದ್ದರು. ಇದೀಗ ಇಡಿ ಅಧಿಕಾರಿಗಳು ದಾಳಿ ಮಾಡಿ ಆಘಾತ ನೀಡಿದ್ದಾರೆ.

ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನ ಶಿವಾಜಿನಗರದ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ವಿದೇಶಿ ವ್ಯವಹಾರಗಳು ಕಂಡು ಬಂದ ಹಿನ್ನೆಲೆ, ರೋಷನ್ ಬೇಗ್‌ಗೆ ಸಂಬಂಧಿಸಿದ 6 ಕಡೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ಸಿಆರ್‌ಪಿಎಫ್ ಭದ್ರತೆ ನೇತೃತ್ವದಲ್ಲಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ. ಇತ್ತೀಚೆಗೆ ಐಎಎಂ ಕೇಸ್​ನಲ್ಲಿ ಬೇಗ್ ಆಸ್ತಿ ಜಪ್ತಿಗೆ ಹೈಕೋರ್ಟ್ ಆದೇಶಿಸಿತ್ತು.

ಐಎಂಎ ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್​.ರೋಷನ್ ಬೇಗ್ ಆಸ್ತಿ ಜಪ್ತಿಗೆ ಹೈಕೊರ್ಟ್​ ಆದೇಶ ನೀಡಿತ್ತು. ಅದರಂತೆ ಇಂದು ಸರ್ಕಾರ ರೋಷನ್ ಬೇಗ್ ಆಸ್ತಿಯನ್ನು ಜಪ್ತಿಮಾಡಿದೆ. ರೋಷನ್ ಬೇಗ್​ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್​ನ ಜಪ್ತಿ ಮಾಡಲಾಗಿದೆ.

2018ರಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಅವರನ್ನು ಸಿಬಿಐ ನವೆಂಬರ್ 22ರಂದು ಬಂಧಿಸಿತ್ತು. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್ ನಿಂದ ಸುಮಾರು ನಾನೂರು ಕೋಟಿ ರೂಪಾಯಿ ಪಡೆದ ಆರೋಪ ರೋಷನ್ ಬೇಗ್ ಮೇಲಿದೆ.

ತಮ್ಮೊಂದಿಗೆ ವ್ಯವಹಾರ ನಡೆಸಿದ ರೋಷನ್ ಬೇಗ್ ಅವರ ಮಾತುಕತೆಯ ಆಡಿಯೋವನ್ನು ಖುದ್ದು ಮನ್ಸೂರ್ ಖಾನ್‌ ನಗರ ಪೊಲೀಸ್ ಆಯುಕ್ತರಿಗೆ ರವಾನೆ ಮಾಡಿದ್ದರು. ಐಎಂಎ ವಂಚನೆ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು. ಈ ವೇಳೆಯೇ ರೋಷನ್ ಬೇಗ್ ವಿಚಾರಣೆಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮುಂದಾಗಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

RELATED TOPICS:
English summary :ED Raid: BIG BREAKING NEWS

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...