Wed,May15,2024
ಕನ್ನಡ / English

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂಸ್

05 Aug 2021
1232

ಬೆಂಗಳೂರು : ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದರು.

ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಇಂದು ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಆರೋಗ್ಯ, ಶಿಕ್ಷಣ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಪರಸ್ಪರ ಸಹಯೋಗದೊಂದಿಗೆ ಕಾರ್ಯ ನಿರ್ವಹಿಸುವ ಕುರಿತು ಚರ್ಚೆ ನಡೆಸಿದರು.

ಕರ್ನಾಟಕ ಅತ್ಯಂತ ಪ್ರಗತಿ ಪರ ರಾಜ್ಯವಾಗಿದ್ದು, ಹೂಡಿಕೆಗೆ ಅತ್ಯುತ್ತಮ ಪೂರಕ ವಾತಾವರಣ ಹೊಂದಿದೆ. ಕೈಗಾರಿಕೋದ್ಯಮಗಳ ಸ್ಥಾಪನೆಗೆ ತ್ವರಿತ ಅನುಮೋದನೆ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ತಂತ್ರಜ್ಞಾನ, ಶಿಕ್ಷಣದಲ್ಲಿ ಮುನ್ನಡೆ ಸಾಧಿಸಿರುವ ರಾಜ್ಯವಾಗಿದ್ದು, ಅತ್ಯುತ್ತಮ ಕುಶಲ ಮಾನವ ಸಂಪನ್ಮೂಲವನ್ನೂ ಹೊಂದಿದೆ. ಯು.ಕೆ. ಮೂಲದ ಹಲವು ಪ್ರತಿಷ್ಠಿತ ಕಂಪೆನಿಗಳಿಗೆ ನೆಲೆಯಾಗಿದ್ದು, ಯು.ಕೆ. ಮೂಲದ ಕಂಪೆನಿಗಳು ಗಣನೀಯವಾಗಿ ಹೂಡಿಕೆ ಮಾಡಿವೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

janata

ಆರೋಗ್ಯ, ಸಂಸ್ಕೃತಿ, ಭಾಷಾ ವಿಷಯಗಳು ಹೀಗೆ ವಿವಿಧ ಕ್ಷೇತ್ರಗಳಿಗೆ ಪ್ರತ್ಯೇಕ ವಿಶ್ವವಿದ್ಯಾಲಯಗಳನ್ನು ಹೊಂದಿರುವ ಕರ್ನಾಟಕದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ವಿವಿಧ ಬಹುರಾಷ್ಟ್ರೀಯ ಕಂಪನಿಗಳ 80ಕ್ಕೂ ಹೆಚ್ಚು ಹೈ-ಟೆಕ್ ಸಂಶೋಧನಾ ಸಂಸ್ಥೆಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಪೂರ್ವದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾಗಿರುವ ಬೆಂಗಳೂರು ನಗರ ದೇಶ, ವಿದೇಶಗಳ ಜನರಿಗೆ ನೆಲೆಯಾಗಿದೆ ಎಂದು ತಿಳಿಸಿದರು.

ಬೆಂಗಳೂರು ಸಂಚಾರ ನಿರ್ವಹಣೆಯ ಕುರಿತಂತೆ ಯು.ಕೆ. ಸಹಯೋಗದ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಸಂದರ್ಭದಲ್ಲಿ ಪಠ್ಯಕ್ರಮ ರೂಪಿಸುವ ನಿಟ್ಟಿನಲ್ಲಿಯೂ ಯು.ಕೆ. ಸಹಯೋಗ ಪಡೆಯಲು ಇರುವ ಅವಕಾಶಗಳ ಕುರಿತು ಚರ್ಚಿಸಲಾಯಿತು.

ಬೆಂಗಳೂರಿನ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಜೆರೆಮಿ ಬೆಡ್ ಫೋರ್ಡ್, ಸಚಿವರಾದ ಆರ್. ಅಶೋಕ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ವಿ. ಪೊನ್ನುರಾಜ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಹಾಜರಿದ್ದರು.

RELATED TOPICS:
English summary :British Hogh Commissioner

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...