Fri,May10,2024
ಕನ್ನಡ / English

ಸಿನಿಮಾ ಚಿತ್ರೀಕರಣ ಅನುಮತಿ ಬಗ್ಗೆ ಹೊಸ ಆದೇಶ ಹೊರಡಿಸುತ್ತೇವೆ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

10 Aug 2021
1985

ಬೆಂಗಳೂರು : ಸಿನಿಮಾ ಶೂಟಿಂಗ್ ವೇಳೆ ಸಾಹಸ ಕಲಾವಿದ ವಿವೇಕ್ ದುರ್ಮರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಪಡೆಯುವ ನಿಯಮಗಳಲ್ಲಿ ಬದಲಾವಣೆ ತರುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿನಿಮಾ ಚಿತ್ರೀಕರಣ ವೇಳೆ ಇಂತಹ ಹಲವು ಅವಘಡಗಳು ನಡೆಯುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಚಿತ್ರೀಕರಣಕ್ಕೆ ನೀತಿ-ನಿಯಮಗಳಿದ್ದರೂ ಕೆಲವರು ಅನುಸರಿಸುವುತ್ತಿಲ್ಲ, ಇದರಿಂದ ಅವಘಡಗಳು ಸಂಭವಿಸುತ್ತವೆ. ನಿಯಮಗಳನ್ನು ಇನ್ನಷ್ಟು ಸ್ಪಷ್ಟೀಕರಣದ ಜೊತೆಗೆ ಸಾಹಸ ಚಿತ್ರೀಕರಣಕ್ಕೆ ಸರ್ಕಾರದಿಂದ ಅನುಮತಿಯನ್ನು ಪಡೆಯಬೇಕು ಅದರ ಜೊತೆ ಅನುಮತಿಯಿಲ್ಲದೆ ಚಿತ್ರೀಕರಣ ಮಾಡುವಂತಿಲ್ಲ ಎಂಬ ಕಠಿಣ ನಿಯಮವನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಜೊತೆಗೆ ವಿಧಾನಸೌಧದಲ್ಲಿ ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಮಾಡ್ತಿದ್ದೇನೆ. ಸಂಜೆ ಬೆಂಗಳೂರಿನ ಎಲ್ಲಾ‌ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇನೆ. ಸಭೆಯಲ್ಲಿ ಬೆಂಗಳೂರು ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.

ಅಮಾಯಕರು, ಪ್ರತಿಭಾವಂತ ಕಲಾವಿದರು ಈ ರೀತಿ ದುರಂತ ಅಂತ್ಯ ಕಾಣಬಾರದು. ಕಾನೂನಿನಡಿಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಖಳನಟರಾದ ಅನಿಲ್ ಮತ್ತು ಉದಯ್ ಸಾವನ್ನಪ್ಪಿದ್ದರು. ಪದೇ ಪದೇ ಈ ರೀತಿಯ ಘಟನೆಗಳು ಮರುಕಳಿಸುತ್ತಿವೆ. ಶೂಟಿಂಗ್ ಮಾಡುವ ವೇಳೆ ಎಲ್ಲ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾಕಷ್ಟು ಎಚ್ಚರಿಕೆ ವಹಿಸುವು ತುಂಬಾ ಮುಖ್ಯ ಅಂತಾ ಹೇಳಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲು ಸೂಚಿಸುತ್ತೇನೆ. ಅಮಾಯಕರು ಮೃತಪಟ್ಟಾಗ ಮನಸ್ಸಿಗೆ ಬೇಸರವಾಗುತ್ತದೆ. ಚಿತ್ರಗಳನ್ನಷ್ಟೇ ನಾವು ವೀಕ್ಷಿಸುತ್ತೇವೆ, ಆದರೆ ತೆರೆ ಹಿಂದೆ ಏನೇನು ನಡೆಯುತ್ತದೆ ಎಂದು ಗೊತ್ತಾಗುವುದಿಲ್ಲ. ಈ ರೀತಿಯ ಘಟನೆಗಳು ನಡೆದಾಗ ಎಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿ ಶೂಟಿಂಗ್ ನಡೆಸುತ್ತಾರೆ ಅನ್ನೋದು ತಿಳಿಯುತ್ತದೆ. ಹೀಗಾಗಿ ಸಿನಿಮಾ ಜಗತ್ತು ಸರಿಯಾದ ರೀತಿ ಅದನ್ನು ನಿರ್ವಹಿಸಬೇಕು ಅಂತಾ ಹೇಳಿದ್ದಾರೆ.

RELATED TOPICS:
English summary :Basavaraj bommai

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...