ತಲೆ ಮೇಲೆ ಕಲ್ಲು ಎತ್ತಿಹಾಕಿ ರೌಡಿಶೀಟರ್ ಬರ್ಬರ ಕೊಲೆ | ಜನತಾ ನ್ಯೂಸ್
ಹಾಸನ : ಹಳೇ ವೈಷಮ್ಯ ಹಿನ್ನೆಲೆ ರೌಡಿಶೀಟರ್ನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಹೊರವಲಯದ ಚಿಕ್ಕತಿರುಪತಿ ರಸ್ತೆಯ ಕಾರೇಹಳ್ಳಿ ಸಮೀಪ ನಡೆದಿದೆ.
ನವಾಜ್ (27) ಕೊಲೆಯಾದ ರೌಡಿಶೀಟರ್. ಹಾಸನ ಜಿಲ್ಲೆಯ ಅರಸೀಕೆರೆ ನಗರದ ಹೊರವಲಯದ ಚಿಕ್ಕತಿರುಪತಿ ರಸ್ತೆಯ ಕಾರೆಹಳ್ಳಿ ಸಮೀಪ ಕೊಲೆ ನಡೆದಿದೆ.
ನಾಲ್ಕು ವರ್ಷಗಳ ಹಿಂದೆ ಮೀನು ಹಿಡಿಯುವ ಸಂಬಂಧ ಎರಡು ತಂಡದ ನಡುವೆ ಗಲಾಟೆ ನಡೆದು ಕೊನೆಗೆ ಆಂಬ್ಯುಲೆನ್ಸ್ ಚಾಲಕ ಅರುಣ್ ಎಂಬಾತನನ್ನು ಅರಸೀಕೆರೆ ನಗರದ ಹೃದಯಭಾಗದಲ್ಲಿರುವ ಅಂಬೇಡ್ಕರ್ ವೃತ್ತದ ಬಳಿ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ್ದರು.
ಆ ಕೊಲೆ ಪ್ರಕರಣದಲ್ಲಿ ನಿನ್ನೆ ರಾತ್ರಿ ಕೊಲೆಯಾಗಿರುವ ನವಾಜ್ ಕೂಡಾ ಭಾಗಿಯಾಗಿದ್ದ. ಜೈಲಿನಲ್ಲಿದ್ದ ಈತ ಇತ್ತೀಚೆಗಷ್ಟೇ ಬೇಲ್ ಪಡೆದು ನಗರದಲ್ಲಿ ಮತ್ತೆ ಕೆಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದ್ದು. ಅರುಣ್ ಕಡೆಯ ಹುಡುಗರೆ ಈತನ ಕೊಲೆ ಮಾಡಿರಬಹುದು ಎನ್ನಲಾಗಿದೆ
ಈ ಸಂಬಂಧ ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.