Fri,May10,2024
ಕನ್ನಡ / English

ರಿಯಲ್ ಎಸ್ಟೇಟ್ ಉದ್ಯಮಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ, 24 ಗಂಟೆಯಲ್ಲಿ ಆರೋಪಿಗಳು ಅರೆಸ್ಟ್​ | ಜನತಾ ನ್ಯೂಸ್

12 Aug 2021
1860

ದಾವಣಗೆರೆ : ತನ್ನ ಪರಿಚಯಸ್ಥರ ಮನೆಗೆ ಹೋಗಿ ವಾಪಸ್ ಮರಳುವಾಗ ಆಟೋರಿಕ್ಷಾದಲ್ಲಿ ಬಂದ ಮೂವರು, ಕಾಂಗ್ರೆಸ್ ಯುವ ಮುಖಂಡನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಇದೀಗ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಾದ 24 ಗಂಟೆಯಲ್ಲಿ 4 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ನಗರದ ಬಸವರಾಜಪೇಟೆಯಲ್ಲಿ ಈ ಕೃತ್ಯ ನಡೆದಿದ್ದು, 42 ವರ್ಷ ವಯಸ್ಸಿನ ಸೀಮೆಎಣ್ಣೆ ಪರಮೇಶ್ ಕೊಲೆಗೀಡಾದ ಕಾಂಗ್ರೆಸ್ ಯುವ ಮುಖಂಡ. ಇವರು ಕಾಂಗ್ರೆಸ್ ಹಿರಿಯ ನಾಯಕ ಸೀಮೆಎಣ್ಣೆ ಮಲ್ಲೇಶ್ ಎಂಬುವವರ ಸಂಬಂಧಿಕರಾಗಿದ್ದರು.

ಹನುಮಂತಪ್ಪ, ಬಸವರಾಜ್‌, ಕುಮಾರ್‌, ನಿಯಾಜ್ ಬಂಧಿತ ಆರೋಪಿಗಳಾಗಿದ್ದು, ನಾಲ್ವರು ಆರೋಪಿಗಳು ದಾವಣಗೆರೆಯ ನಿವಾಸಿಗಳಾಗಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದ್ದಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮಾಹಿತಿ ನೀಡಿದ್ದಾರೆ.

ಬುಧವಾರ ರಾತ್ರಿ ಬಸವರಾಜಪೇಟೆಯ ತನ್ನ ಸ್ನೇಹಿತರ ಮನೆಗೆ ಪರಮೇಶ್ ಹೋಗಿದ್ದರು. ಸ್ನೇಹಿತರನ್ನು ಮಾತನಾಡಿಸಿಕೊಂಡು ಮನೆಯಿಂದ ಹೊರಬಂದು ತಮ್ಮ ಮನೆಗೆ ಹೊರಟಿದ್ದರು. ಈ ವೇಳೆ ಆಟೋರಿಕ್ಷಾದಲ್ಲಿ ಬಂದ ಮೂವರು ಹೊಂಚು ಹಾಕಿ ಕುಳಿತಿದ್ದರು. ಆಗ ಪರಮೇಶ್ ಮೇಲೆ ಮೂವರು ಹಲ್ಲೆ ನಡೆಸಿದ್ದು, ಕೆಳಗಡೆ ಬೀಳುತ್ತಿದ್ದಂತೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹಂತಕರು ಪರಾರಿಯಾಗಿದ್ದಾರೆ.

ರಕ್ತಸಿಕ್ತವಾಗಿದ್ದ ಪರಮೇಶ್‌ರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ಮುಂದಾದರು. ಆದರೆ ಅಷ್ಟರಲ್ಲೇ ಪರಮೇಶ್ ಇಹಲೋಕ ತ್ಯಜಿಸಿದ್ದರು.

RELATED TOPICS:
English summary :Davanagere

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...