Sat,May18,2024
ಕನ್ನಡ / English

ನನಗೆ ನಿಮ್ಮ ನೆಹರೂರರನ್ನು ನೋಡಿಯೇ ಹುಕ್ಕಾ ಬಾರ್ ನೆನಪಾಗಿದ್ದು, ಇಂದಿರಾ ಗಾಂಧಿ ಹೆಸರಿಟ್ಟಿದ್ದು ಯಾವ ಪುರುಷಾರ್ಥಕ್ಕಾಗಿ? | ಜನತಾ ನ್ಯೂಸ್

13 Aug 2021
2130

ಬೆಂಗಳೂರು : ಕಾಂಗ್ರೆಸ್ ನವರು ತಮ್ಮ ಕಚೇರಿಗಳಲ್ಲಿ ನೆಹರು ಹೆಸರಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇದೀಗ ಮತ್ತೆ ವಿವಾದಕ್ಕೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ನೆಹರು ಹುಕ್ಕಾ ಸೇದುತ್ತಿದ್ದದ್ದು ತಪ್ಪೋ? ರವಿ ಹೇಳಿದ್ದು ತಪ್ಪೋ? ನೆಹರು ಹುಕ್ಕಾ ಸೇದುವ ನೂರಾರು ಫೋಟೋಗಳಿವೆ. ಸ್ವತಃ ಸಿದ್ದರಾಮಯ್ಯ, ಸಿ.ಎಂ.ಇಬ್ರಾಹಿಂ ನೆಹರು, ಇಂದಿರಾ ಬಗ್ಗೆ ಮಾತನಾಡಿರುವುದನ್ನು ಹೊರಗೆ ಬಿಡಲೇ? ಇಬ್ರಾಹಿಂ ಅವರು ಇಂದಿರಾ ಅವರನ್ನು ಏನಂತ ಕರೆದರು? ನಾನು ನೆಹರು, ಇಂದಿರಾ ಬಗ್ಗೆ ಮಾತನಾಡಿದ್ದಕ್ಕೆ ಕಾಂಗ್ರೆಸ್ ನವರು ಉರಿ ಹತ್ತಿಸಿಕೊಂಡಿದ್ದಾರೆ. ನನ್ನ ಮೇಲೆಯೇ ಕಾಂಗ್ರೆಸ್ ನವರಿಗೆ ಇಷ್ಟೊಂದು ದ್ವೇಷ ಇರುವಾಗ ಇನ್ನು ಕಾಂಗ್ರೆಸ್ ನವರಿಗೆ ನೆಹರು ಬಗ್ಗೆ ಇನ್ನೆಷ್ಟು ದ್ವೇಷ ಇರಬೇಡ ಎಂದು ಪ್ರಶ್ನಿಸಿದ್ದಾರೆ.

ನನಗೆ ಕುಡಿಯೋ ಅಭ್ಯಾಸವಿಲ್ಲ, ಕುಡುಕನ ಪಟ್ಟ ಕಟ್ಟಿದರು. ಆದರೆ ಪ್ರತಿದಿನ ಕುಡಿಯುವವರು ಅವರೇ. ನಾನು ಮುಂಜಾನೆ 5 ಗಂಟೆಗೆ ಎದ್ದು ಯೋಗ ಮಾಡುತ್ತೇನೆ. ದಿನದ 24 ಗಂಟೆ ಪಕ್ಷ, ಸಮಾಜ, ರಾಷ್ಟ್ರದ ಬಗ್ಗೆ ಚಿಂತನೆ ಮಾಡುತ್ತಾ ಸದಾ ಸಕ್ರಿಯನಾಗಿರುತ್ತೇನೆ. ಆದರೆ ಅವರು ಏನೇನು ಮಾಡುತ್ತಾರೆ? ಅವರ ಹಳೆಯ ಕಥೆಗಳೇನು ಎಂಬುದನ್ನು ಹೇಳಲೇ? ಅವರ ಮಟ್ಟಕ್ಕೆ ನಾನು ಇಳಿದಿಲ್ಲ. ನಾನು ಆರ್.ಎಸ್.ಎಸ್ ಸ್ವಯಂ ಸೇವಕ. ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಪರೋಕ್ಷ ತಿರುಗೇಟು ನೀಡಿದ್ದಾರೆ.

ಸಿಟಿ ರವಿ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಇದೀಗ ಮತ್ತೆ ಟ್ವೀಟ್ ಮಾಡಿರುವ ಸಿಟಿ ರವಿ, "ಮಾನ್ಯ ಸಿದ್ದರಾಮಯ್ಯನವರೇ, ನನಗೆ ನಿಮ್ಮ ನೆಹರೂರವರನ್ನು ನೋಡಿಯೇ ಹುಕ್ಕಾ ಬಾರ್ ನೆನಪಾಗಿದ್ದು" ಎಂದು ಹೇಳಿದ್ದಾರೆ.

"ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಎಂದು ಹೆಸರಿಟ್ಟಿದ್ದರೆ ಬಡವರ ಹಸಿವು ನೀಗುತ್ತಿರಲಿಲ್ಲವೇ?ನಿಮ್ಮನ್ನು ನೋಡಿದಾಗ ನಿಮ್ಮ ಸ್ನೇಹಿತರು ಹೇಳುತ್ತಿದ್ದ ನಿಮ್ಮ ಬ್ರಾಂಡ್ ನೆನಪಾಯಿತು" ಎಂದು ಬರೆದುಕೊಂಡಿದ್ದಾರೆ.

ಸಿಟಿ ರವಿಗೆ ಅವರ ಸಂಸ್ಕೃತಿಗೆ ತಕ್ಕ ಹಾಗೆ ಹುಕ್ಕಾ ಬಾರ್ ನೆನಪಾಗಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಟಿ ರವಿ, "ಇಂದಿರಾ ಗಾಂಧಿ ಹೆಸರಿಟ್ಟಿದ್ದು ಯಾವ ಪುರುಷಾರ್ಥಕ್ಕಾಗಿ?" ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :CT Ravi

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...