Sun,May19,2024
ಕನ್ನಡ / English

ಮೇಕೆದಾಟು ಯೋಜನೆ ಬಗ್ಗೆ ಬಸವರಾಜ ಬೊಮ್ಮಾಯಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು: ಸಿದ್ದರಾಮಯ್ಯ | ಜನತಾ ನ್ಯೂಸ್

13 Aug 2021
2712

ಬೆಂಗಳೂರು : ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು.

ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೂಡಾ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವನೀತಿ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ, ಯಾವ ಬಗೆಯ ರಾಜಿಯನ್ನೂ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದೆ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.

ಈ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ಅನಗತ್ಯವಾಗಿ ಇದೊಂದು ಆಂತರಿಕ ವಿವಾದವಾಗಿ ನಾವುನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು.

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ವಿಚಾರದಲ್ಲಿಯೂ ಕೇಂದ್ರ ಸರ್ಕಾರದ ತಳೆದ ದಂದ್ವ ನಿಲುವು ರಾಜ್ಯದ ಹಿತಾಸಕ್ತಿಗೆ ಮಾರಕವಾಯಿತು ಎಂದರು.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...