Sat,May18,2024
ಕನ್ನಡ / English

ಅಭಿನವ ವಾಲ್ಮೀಕಿ ಖ್ಯಾತಿಯ, ಯಕ್ಷಗಾನ ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ! | ಜನತಾ ನ್ಯೂಸ್

15 Aug 2021
2682

ಮಂಗಳೂರು : ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಹೆಸರಾದ ಪ್ರಸಿದ್ದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (68 ವ) ಅವರು ಶನಿವಾರ ತಡರಾತ್ರಿ ನಿಧನರಾದರು.

ರಕ್ತ ಸಂಬಂಧಿತ ಮೈಲೋಡಿಸ್‌ಪ್ಲೇಸಿಯಾ ಎಂಬ ಕಾಯಿಲೆಯಿಂದಾಗಿ ಕೆಲವು ತಿಂಗಳಿಂದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಪುರುಷೋತ್ತಮ ಪೂಂಜರು ಯಕ್ಷಗಾನ ವೇಷಧಾರಿ, ಪ್ರಸಂಗಕರ್ತ, ಹಿಮ್ಮೇಳ ವಾದಕ, ಸಮರ್ಥ ಭಾಗವತರಾಗಿ ಯಕ್ಷರಂಗದ ವಿವಿಧ ಮಜಲುಗಳಲ್ಲಿ ಅನುಭವ ಹೊಂದಿದ್ದರು. ಪೂಂಜರು ಕನ್ನಡ ಮತ್ತು ತುಳು ಭಾಷೆಯಲ್ಲಿ ಸುಮಾರು 32 ಪ್ರಸಂಗಗಳನ್ನು ರಚಿಸಿದ್ದಾರೆ. ಅವರ "ಮಾನಿಷಾದ" ಎಂಬ ಯಕ್ಷಗಾನ ಪ್ರಸಂಗವು ಅಪಾರ ಜನಪ್ರಿಯತೆ ಗಳಿಸಿದೆ.

ರಾಮಾಯಣದ ಕಥಾಭಾಗ "ಮಾ ನಿಷಾದ" ಅಲ್ಲದೆ, ವಧು ವೈಶಾಲಿನಿ, ನಳಿನಾಕ್ಷ ನಂದಿನಿ, ಉಭಯಕುಲ ಬಿಲ್ಲೋಜ, ಕ್ಷಾತ್ರ ಮೇಧ, ಮಾತಂಗ ಕನ್ಯೆ, ಗಾಂಗೇಯ, ಕಲಿ ಕೀಚಕ, ರಾಜಾ ದ್ರುಪದ, ಮೇಘ ಮಯೂರಿ, ಸ್ವರ್ಣ ನೂಪುರ, ಅಮೃತ ವರ್ಷಿಣಿ, ಮೇಘ ಮಾಣಿಕ್ಯ ಮೊದಲಾದ ಸೂಪರ್ ಹಿಟ್ ಪ್ರಸಂಗಗಳನ್ನು ರಚಿಸಿ, ಅಭಿನವ ವಾಲ್ಮೀಕಿ ಎಂದು ಅಭಿಮಾನಿಗಳಿಂದ ಕರೆಸಿಕೊಂಡವರು. 32ರಷ್ಟು ಯಕ್ಷಗಾನ ಕೃತಿಗಳನ್ನು ಅವರು ರಚಿಸಿದ್ದಾರೆ.

ಮಂಗಳೂರಿನ ಬೊಟ್ಟಿಕೆರೆಯ ಪುರುಷೋತ್ತಮ ಪೂಂಜರು ಬಿ.ಎಸ್ ಸಿ ಪದವೀಧರರಾಗಿದ್ದರು. ಕಟೀಲು ಒಂದನೇ ಮೇಳದ ಪ್ರಧಾನ ಭಾಗವತರಾಗಿ ಯಕ್ಷ ಸೇವೆಗೈಯುತ್ತಿದ್ದರು.

RELATED TOPICS:
English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...