ನಾಳೆಯಿಂದ 9 ರಿಂದ 12 ನೇ ತರಗತಿಗಳು ಪ್ರಾರಂಭ, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಿಲ್ಲ! | ಜನತಾ ನ್ಯೂಸ್

22 Aug 2021
503

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ 9 ರಿಂದ 12 ತರಗತಿಯವರೆಗಿನ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9 ಮತ್ತು 10 ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.

ತುಮಕೂರಿನಲ್ಲಿ ಶಾಲೆಗಳ ಸಿದ್ಧತೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ಕಡಿಮೆಯಾಗಿರುವುದರಿಂದ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಹಾಗೂ ತಾಂತ್ರಿಕ ಸಲಹೆಗಾರರ ಸಲಹೆ ಮೇರೆಗೆ ಆಫ್ಲೈನ್ ತರಗತಿಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ 9, 10, 11, 12ನೇ ತರಗತಿಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಕಳೆದ ಒಂದು ವರ್ಷದಿಂದ ಎಷ್ಟೇ ಪ್ರಯತ್ನಿಸಿದರೂ ಆನ್‌ ಲೈನ್ ನಲ್ಲಿ ಉತ್ತಮವಾದ ಶಿಕ್ಷಣ ನೀಡಲು ಸಾಧ್ಯವಾಗಲಿಲ್ಲ. ಬೇರೆ ಕಾರಣಗಳಿಂದ ಉತ್ತಮ ಶಿಕ್ಷಣ ಕೊಡಲಾಗಲಿಲ್ಲ. ಕೊರೊನಾ ಪಾಸಿಟಿವಿಟ ದರ ಕಡಿಮೆ ಇರುವ ಕಾರಣದಿಂದ ತರಗತಿ ಆರಂಭ ಮಾಡಿ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದು, ಹಾಗಾಗಿ ಶಾಲೆಗಳನ್ನು ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.

ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಅಲ್ಲದೇ, ಆನ್‌ಲೈನ್‌ ಹಾಗೂ ಆಫ್‌ಲೈನ್‌ನಲ್ಲಿಯೂ ತರಗತಿಗಳು ನಡೆಯಲಿವೆ. ಕೊರೊನಾದ ಮೂರನೇ ಅಲೆಯು ಮಕ್ಕಳಿಗೆ ಸಮಸ್ಯೆಯಾಗಲಿದೆ ಎಂದಿತ್ತು. ಆದರೆ, ಒಂದು ತಿಂಗಳಿನಿಂದ ಎಲ್ಲಾ ತಜ್ಞರು ಮಕ್ಕಳ ಮೇಲೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

ಈ ಹಿನ್ನೆಲೆ ಮುಂದಿನ ಹಂತದಲ್ಲಿ 1ರಿಂದ 8ನೇ ತರಗತಿವರೆಗೂ ಶಾಲೆ ತೆರೆಯುವ ಪ್ರಯತ್ನ ಮಾಡುತ್ತೇವೆ. ಶೇ.2ಕ್ಕಿಂತ ಅಧಿಕ ಪಾಸಿಟಿವಿಟಿ ದರ ಇದ್ದಲ್ಲಿ ಆ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ. ರಾಜ್ಯದ ಐದು ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿದೆ ಎಂದು ಹೇಳಿದರು.

9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಿನ ವೇಳೆ ಅರ್ಧ ದಿನ ಮಾತ್ರ ಭೌತಿಕ ತರಗತಿ ನಡೆಯಲಿವೆ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ, ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.50 ರವರೆಗೆ ತರಗತಿಗಳು ನಡೆಯಲಿವೆ.

RELATED TOPICS:
English summary :School reopen

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನ್ಯೂಸ್ MORE NEWS...