ರುಚಿಯಾಗಿ ಚಿಕನ್​ ಫ್ರೈ ಮಾಡಿಲ್ಲ ಎಂದು ಹೆಂಡತಿ ಕೊಲೆ ಮಾಡಿದ ಗಂಡ | ಜನತಾ ನ್ಯೂಸ್

23 Aug 2021
437

ಬೆಂಗಳೂರು : ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಪತ್ನಿಯನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಶಿರೀನ್ ಭಾನು (25) ಕೊಲೆಯಾದ ಗೃಹಿಣಿ. ಕೊಲೆ ಮಾಡಿದ ಪತಿರಾಯ ಮುಬಾರಕ್ (32)​ ಇದೀಗ ಆರೋಪಿ ಪತಿ ಮುಬಾರಕ್‌ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಆಗಸ್ಟ್ 18 ರಂದು ಪತ್ನಿಯನ್ನು ಪತಿಯೇ ಕೊಲೆ ಮಾಡಿದ್ದ. ಬಳಿಕ, ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ.

ಕಳೆದ ಐದು ವರ್ಷಗಳ ಹಿಂದೆ ಪ್ರೀತಿ ಮದುವೆಯಾಗಿದ್ದ ಈ ಜೋಡಿ ಬೆಂಗಳೂರಿನಲ್ಲಿ ಸಂಸಾರ ನಡೆಸುತ್ತಿದ್ದರು. ಹೆಸರಘಟ್ಟದ ತಬರನಹಳ್ಳಿಯಲ್ಲಿ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್​ದರು, ಮುಬಾರಕ್​ ಹಾಸಿಗೆ ವ್ಯಾಪಾರ ನಡೆಸುತ್ತಿದ್ದರೆ ಶಿರೀನ್​ ಗೃಹಿಣಿಯಾಗಿದ್ದರು.

ಕಳೆದ ಇಪ್ಪತ್ತು ದಿನಗಳ ಹಿಂದೆ ಈ ಜೋಡಿಯ ಮನೆಗೆ ಶಿರೀನ್​ ಬಾನ್​ ತಂಗಿ ಆಗಮಿಸಿದ್ದರು. ಈ ವೇಳೆ ಮನೆಯಲ್ಲಿ ವಿಶೇಷವಾಗಿ ಚಿಕನ್​ ಅಡುಗೆ ಮಾಡಲಾಗಿತ್ತು. ಆದರೆ, ಶಿರೀನ್​ ಬಾನ್​ ಚಿಕನ್​ ಫ್ರೈ ಅನ್ನು ರುಚಿಯಾಗಿ ಮಾಡಿರಲಿಲ್ಲ ಎಂದು ಮುಬಾರಕ್​ ನಾದಿನಿಯ ಎದುರೆ ಹೆಂಡತಿಗೆ ಬೈದಿದ್ದ.

ಇದರಿಂದ ಶಿರೀನ್​ ಬಾನು ಕೋಪಗೊಂಡಿದ್ದಳು. ಶಿರೀನ್​ ಬಾನು ತಂಗಿ ಊರಿಗೆ ಮರಳಿದ ಬಳಿಕ ಇದೇ ವಿಚಾರಕ್ಕೆ ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು.

ತಂಗಿಯ ಮುಂದೆ ಹಂಗಿಸಿದ್ದ ಮುಬಾರಕ್​ ವರ್ತನೆಯಿಂದ ಕೆರಳಿದ ಶಿರೀನ್​ ಬಾನ್​ ಮಾತಿಗೆ ಮಾತು ಬೆಳೆಸಿ, ಕೂಗಾಡಿದ್ದಳು. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿತ್ತು. ಈ ಸಂದರ್ಭದಲ್ಲಿ ಮುಬಾರಕ್​ ದೊಣ್ಣೆಯಿಂದ ಹೆಂಡತಿ ಮೇಲೆ ಹಲ್ಲೆ ನಡೆಸಿದ್ದ. ಜೋರಾಗಿ ಬಿದ್ದ ಪೆಟ್ಟಿನಿಂದ ಶಿರೀನ್​ ಅಸುನೀಗಿದ್ದಳು. ನಂತರ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ.

ಕಳೆದ 18 ದಿನಗಳಿಂದ ಮಗಳು ಫೋನಿಗೆ ಸಿಗದಿರುವ ಬಗ್ಗೆ ಶಿರೀನ್​ ಬಾನು ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದರು. ಈ ಸಂಬಂಧ ಮುಬಾರಕ್​ಗೆ ಕರೆ ಮಾಡಿದಾಗ ಆತ ಕುಂಟು ನೆಪ ಹೇಳುತ್ತಿದ್ದ. ಈ ವೇಳೆ ಜೋರಾಗಿ ಗದರಿ ಕೇಳಿದಾಗ ಭಯಗೊಂಡ ಆತ, ವಕೀಲರೊಂದಿಗೆ ಪೊಲೀಸರ ಮುಂದೆ ಶರಣಾಗಿ ಕೊಲೆ ಮಾಡಿದ ಘಟನೆ ಕುರಿತು ತಿಳಿಸಿದ್ದಾನೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...