Thu,Apr25,2024
ಕನ್ನಡ / English

ರಾಜ್ಯದಲ್ಲಿ ಶೀಘ್ರವೇ ಹೊಸ ಡಿಜಿಟಲ್ ನೀತಿ ಅನುಷ್ಠಾನ : ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

23 Aug 2021
2967

ಬೆಂಗಳೂರು : ರಾಜ್ಯದಲ್ಲಿ ಹೊಸ ಡಿಜಿಟಲೀಕರಣ ನೀತಿಯ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿ ಪಾಲಿಸಿಯನ್ನು ಜಾರಿಗೆ ತರಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, 2021-22ನೇ ಸಾಲಿನ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೊಸ ಡಿಜಿಟಲೀಕರಣ ನೀತಿಯನ್ನು ಜಾರಿಗೆ ತರಲಿದ್ದೇವೆ. ತಜ್ಞರು ಸಲಹೆಗಳನ್ನು ನೀಡಿದರೆ ಆದಷ್ಟು ಶೀಘ್ರವಾಗಿ ಡಿಜಿಟಲ್ ನೀತಿ ಜಾರಿಗೆ ತರಲು ಅನುಕೂಲವಾಗುತ್ತದೆ. ಅದೇ ರೀತಿ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಗೆ ಒತ್ತು ನೀಡಲು ಕರ್ನಾಟಕದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ(ಆರ್ ಆಯಂಡ್ ಡಿ) ನೀತಿಯನ್ನು ಜಾರಿಗೆ ಮಾಡಲಿದ್ದೇವೆ. ಇದಕ್ಕೆ ಬೇಕಾದ ವಿಶೇಷ ಆದ್ಯತೆ ಮುಂದಿನ ಬಜೆಟ್ ನಲ್ಲಿ ನೀಡಲಿದ್ದೇವೆ ಎಂದರು.

ಶಿಕ್ಷಣ ವ್ಯವಸ್ಥೆಯ ಮೂಲಭೂತ ಬದಲಾವಣೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಸಾಕ್ಷ್ಯಿಯಾಗಲಿದೆ. ಅನುಷ್ಠಾನವೇ ದೊಡ್ಡ ಸವಾಲಾಗಿದೆ. ಅದನ್ನು ಬುದ್ದಿವಂತಿಕೆಯಿಂದ ಅನುಷ್ಠಾನ ಮಾಡಬೇಕು. ಇಲಾಖೆ ಆಧಾರಿತ ಶಿಕ್ಷಣದ ಬದಲಿಗೆ ವಿದ್ಯಾರ್ಥಿ ಆಧಾರಿತ ಶಿಕ್ಷಣ ವ್ಯವಸ್ಥೆಯಾಗಿ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಎನ್ಇಪಿ ಸಾಕಷ್ಟು ಬದಲಾವಣೆ ತರಲಿದೆ. ವಿದ್ಯಾರ್ಥಿಗಳ ಕ್ರಿಯಾತ್ಮಕತೆ, ಜ್ಞಾನವನ್ನು ಪೂರ್ಣಪ್ರಮಾಣದ ಅಭಿವ್ಯಕ್ತಿಗೆ ಸಹಕಾರಿಯಾಗಲಿದೆ. ವಿದ್ಯಾರ್ಥಿಯ ಕ್ರಿಯಾಶೀಲತೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ನಮ್ಮ ದೇಶದ ಎಲ್ಲ ರಾಜ್ಯಗಳ ಪೈಕಿ ಎಲ್ಲರಿಗಿಂತ ಮೊದಲೇ ಕರ್ನಾಟಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದಿದ್ದು, ಇದು ರಾಜ್ಯದ ದಿಕ್ಕನ್ನೇ ಬದಲಿಸುತ್ತದೆ. ಕರ್ನಾಟಕದಲ್ಲಿ ಇಂದಿನಿಂದ ಹೊಸ ಮನ್ವಂತರ ಆರಂಭವಾಗಿದ್ದು, ಇಡೀ ದೇಶದಲ್ಲೇ ಕರ್ನಾಟಕವು ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ದಾಪುಗಾಲು ಇಟ್ಟಿದೆ. ಇಡೀ ದೇಶವನ್ನೇ ನವ ದಿಕ್ಕಿನತ್ತ ಚಲಿಸುವಂತೆ ಮಾಡಬಲ್ಲ ಶಿಕ್ಷಣ ನೀತಿಯು, ಬಹ ಶಿಸ್ತಿಯ ಹಾಗೂ ಬಹು ಆಯ್ಕೆಯ ಕಲಿಕೆಗೆ ಉತ್ತೇಜನ ನೀಡಲಿದ್ದು, ವಿದ್ಯಾರ್ಥಿಗಳು ತಮಗಿಷ್ಟವಾದ ವಿಷಯವನ್ನು ಮುಕ್ತವಾಗಿ ಅಧ್ಯಯನ ಮಾಡಬಹುದಾಗಿದೆ ಎಂದು ಪ್ರಧಾನ್ ಹೇಳಿದರು.

RELATED TOPICS:
English summary :Basavaraj bommai

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...