Tue,May14,2024
ಕನ್ನಡ / English

ಶೌಚಾಲಯದ ಒಳಗೆ ತನ್ನ ಪ್ಯಾಂಟ್​​ನ್ನೇ ಬಳಸಿ ನೇಣಿಗೆ ಶರಣಾದ ಅತ್ಯಾಚಾರದ ಆರೋಪಿ! | ಜನತಾ ನ್ಯೂಸ್

29 Aug 2021
2080

ವಿಜಯಪುರ : ವಿಜಯಪುರ ಜಿಲ್ಲೆಯ ಬಾಲಕಿಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶೌಚಾಲಯಕ್ಕೆ ಹೋಗಿದ್ದ ವೇಳೆ ಪ್ಯಾಂಟ್‌ ಬಳಸಿ ನೇಣಿಗೆ ಶರಣಾಗಿದ್ದಾನೆ.

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಡಾಬಾದಲ್ಲಿ ತಂದೆಯೊಂದಿಗೆ ವಾಸವಿದ್ದ 13 ವರ್ಷದ ಬಾಲಕಿ ಮೇಲೆ ಡಾಬಾ ಮಾಲೀಕನೇ ಅತ್ಯಾಚಾರವೆಸಗಿದ್ದ. ನಿನ್ನೆ ಸಂಜೆ ಈ ಘಟನೆ ನಡೆದಿತ್ತು. ಈ ಸಂಬಂಧ ಬಾಲಕಿಯ ತಂದೆ ದೇವಿಂದ ಸಂಗೋಗಿ ಎಂಬ ಡಾಬಾ ಮಾಲೀಕನ ವಿರುದ್ಧ ದೂರು ನೀಡಿದ್ದರು. ದೂರು ನೀಡುತ್ತಲೇ ಆತ ಸ್ಥಳದಿಂದ ಪರಾರಿಯಾಗಿದ್ದ.

ತೀವ್ರಗತಿಯಲ್ಲಿ ಹುಡುಕಾಟ ನಡೆಸಿದ್ದ ಪೊಲೀಸರು ತಡರಾತ್ರಿ ಆತನನ್ನು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಈಗ ವಿಚಾರಣೆ ವೇಳೆ ಪೊಲೀಸ್​​ ಕಸ್ಟಡಿಯಲ್ಲಿದ್ದಾಗಲೇ ಪೋಕ್ಸೋ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್‌ ಅಧಿಕಾರಿ, ತಡರಾತ್ರಿ ಆರೋಪಿಯ ಬಂಧನವಾಗಿತ್ತು. ನಸುಕಿನ ಜಾವ ಶೌಚಗೃಹಕ್ಕೆ ತೆರಳಿದ್ದ ಆರೋಪಿ ಅಲ್ಲಿ ನೇಣು ಹಾಕಿಕೊಂಡಿದ್ದಾನೆ. ಇದನ್ನು ಕಂಡ ನಮ್ಮ ಸಿಬ್ಬಂದಿ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ ಎಂದಿದ್ದಾರೆ.

ಲಾಕಪ್ ಡೆತ್ ಎನ್ನಬಹುದಾದರೂ ಪೊಲೀಸರ‌ ಕಿರುಕುಳದಿಂದ ಆರೋಪಿ ಮೃತಪಟ್ಟಿಲ್ಲ. ನೇಣು ಹಾಕಿಕೊಂಡಿದ್ದ ಕಾರಣ‌ ಮೃತಪಟ್ಟಿದ್ದಾನೆ. ಇಂಥ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ. ಈ ಘಟನೆ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದಿದ್ದಾರೆ.

RELATED TOPICS:
English summary :Vijayapura

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...