Sat,May18,2024
ಕನ್ನಡ / English

ನಾನು ಬಿಜೆಪಿ ಪರವಾಗಿ ಇಲ್ಲ. ಕಾಂಗ್ರೆಸ್ ಪರವಾಗಿಯೂ ಇಲ್ಲ! | ಜನತಾ ನ್ಯೂಸ್

30 Aug 2021
3571

ಕಲಬುರಗಿ : ನಾನು ಬಿಜೆಪಿ ಪರವಾಗಿ ಇಲ್ಲ. ಕಾಂಗ್ರೆಸ್ ಪರವಾಗಿಯೂ ಇಲ್ಲ. ಕಾಂಗ್ರೆಸ್ ಅಧ್ಯಕ್ಷರು ಯಡಿಯೂರಪ್ಪನವರ ಪರವಾಗಿ ಸಾಫ್ಟ್ ಕಾರ್ನರ್ ಮಾತುಗಳನ್ನು ಹೇಳಿದ್ದಾರೆ. ಆದರೆ, ನಮಗೆ ಸಾಫ್ಟ್ ಕಾರ್ನರ್ ಅವಶ್ಯಕತೆ ಇಲ್ಲ ಎಂದರು.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ಸಾರ್ವಜನಿಕರ ಯೋಗಕ್ಷೇಮಕ್ಕಾಗಿ ಸರ್ಕಾರವನ್ನು ಬೆಂಬಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಾಸ್ತವವಾಗಿ, ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ಸರ್ಕಾರದ ಬಗ್ಗೆ ಮೃದುವಾಗಿ ಮಾತನಾಡಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಸೇರುವ ಬಗ್ಗೆ ಜಿ.ಟಿ.ದೇವೇಗೌಡ ಅವರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ನಾವು ಮುಖಂಡರನ್ನು ಕರೆತರಲು ಬೇರೆ ಪಕ್ಷದ ಮುಖಂಡರ ಮನೆ ಬಳಿ ನಿಂತಿಲ್ಲ.‌ ಕಾಂಗ್ರೆಸ್, ಬಿಜೆಪಿಯವರೇ ಈ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಯಾವಾಗಲೂ ಆಡಳಿತ ಪಕ್ಷದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತದೆ, ಆದರೆ ಆ ಪಕ್ಷ ರಾಜ್ಯ ಮತ್ತು ದೇಶದಲ್ಲಿ ಆಡಳಿತದಲ್ಲಿದ್ದಾಗ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ವಾಗ್ದಾಳಿ ನಡೆಸಿದರು.

ಪ್ರಶ್ನೆಯೊಂದಕ್ಕೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಾನು ಈಗ ನಾನು ಮಾತನಾಡುವುದಿಲ್ಲ, ಆದರೆ ಸೂಕ್ತ ಸಮಯದಲ್ಲಿ ಆ ಬಗ್ಗೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಕೋವಿಡ್ ಕಾರಣ ಹೋರಾಟ ಮಾಡಲಾಗಿಲ್ಲ. ಅವಶ್ಯಕತೆ ಬಂದಾಗ ಹೋರಾಟಕ್ಕೆ ಧುಮಕುತ್ತಿವೆ. ಕಾಂಗ್ರೆಸ್ ನಾಯಕರು ಪ್ರತಿನಿತ್ಯ ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಅವಧಿಯಲ್ಲಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.

ರಾಜಕಾರಣದಲ್ಲಿ ಇತ್ತೀಚೆಗೆ ಸಿದ್ಧಾಂತಗಳಲ್ಲಿ ಬೆನ್ನು ತಟ್ಟಿಕೊಳ್ಳುವ ಸ್ಥಿತಿ ಇಲ್ಲ. ಮೈಸೂರು ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರೇ ನಮ್ಮ ಜೊತೆ ಮೈತ್ರಿಗೆ ಸಿದ್ದರಿರಲಿಲ್ಲ.‌ ಕಲಬುರಗಿ ಪಾಲಿಕೆಯಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಒಂದು ವೇಳೆ ಅತಂತ್ರ‌ ಫಲಿತಾಂಶ ಬಂದರೆ ಮುಂದೆ ಯಾವ ಪಕ್ಷದೊಂದಿಗೆ ‌ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ಮುಂದೆ ನಿರ್ಧರಿಸುತ್ತೇವೆ ಎಂದರು.

RELATED TOPICS:
English summary :H D Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...