Sun,May19,2024
ಕನ್ನಡ / English

ಮದುವೆಯಾಗುವುದಾಗಿ ನಂಬಿಸಿ ವಂಚನೆ :ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್! | ಜನತಾ ನ್ಯೂಸ್

01 Sep 2021
3225

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಪೊಲೀಸರು 34 ವರ್ಷದ ಜಗನ್ನಾಥ್ ಎಂಬುವವನ್ನು ಬಂಧಿಸಿದ್ದಾರೆ.

ವಿಜಯಪುರದ ಮೂಲದ ಜಗನ್ನಾಥ್ ಬಂಧಿತ ಆರೋಪಿ. ಈತನಿಂದ 115 ಗ್ರಾಂ ಚಿನ್ನಾಭರಣ, 1 ಲಕ್ಷ ನಗದು ಹಾಗೂ‌ ಐದು ಫೋನ್​ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ‌. ಜಗನ್ನಾಥ್, ಕಳೆದ ಐದು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ.

ಆರಂಭದಲ್ಲಿ ರಿಯಲ್‌ ಎಸ್ಟೇಟ್ ವ್ಯವಹಾರ ಮಾಡಿ ಕೈ ಸುಟ್ಟುಕೊಂಡಿದ್ದ. ಬಳಿಕ ಹಣ ಸಂಪಾದನೆಗಾಗಿ ವಂಚನೆ ದಾರಿ ಹಿಡಿದಿದ್ದ. ಮ್ಯಾಟ್ರಿಮೋನಿ ಸಂಭದಿಸಿದ ವಿವಿಧ ಜಾಲತಾಣಗಳಲ್ಲಿ ಅಸಲಿ ಹೆಸರನ್ನು ಮರೆಮಾಚಿ ರಮೇಶ್, ವಿಜಯ್ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್​ ಕ್ರಿಯೇಟ್ ಮಾಡುತ್ತಿದ್ದ. ಓದಿದ್ದು ಬಿಎ ಆದರೂ ಸಿವಿಲ್ ಎಂಜಿನಿಯರ್ ಓದಿಕೊಂಡಿರುವುದಾಗಿ ಹೇಳಿಕೊಂಡಿದ್ದ.

ಹೆಚ್ಚಾಗಿ ವಿಚ್ಛೇದಿತ ಮಹಿಳೆ ಹಾಗೂ ಗಂಡನಿಂದ ದೂರ ಉಳಿದದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಮಹಿಳೆಯರನ್ನು ಭೇಟಿ ಮಾಡಿ ಕೆಲ ದಿನಗಳ ಬಳಿಕ ಕಾರ್​ನಲ್ಲಿ ಯುವತಿಯರನ್ನು ಪ್ರವಾಸಕ್ಕೆ ಕರೆದೊಯ್ದು ಮದುವೆಯಾಗುವುದಾಗಿ ನಂಬಿಸುತ್ತಿದ್ದ.

ಆಕ್ಸಿಡೆಂಟ್ ಆಗಿದೆ. ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗಿದೆ. ಸೈಟ್ ಖರೀದಿ ಮಾಡಲಿಕ್ಕೆ ಹಣ ಬೇಕು ಅಂತ ವಸೂಲಿ ಮಾಡುತ್ತಿದ್ದ. ಆರೋಪಿ ವಿರುದ್ಧ ಇದುವರೆಗೆ ಮೂರು ಯುವತಿಯರು ದೂರು ನೀಡಿದ್ದಾರೆ. ಬನಶಂಕರಿ ಹೆಣ್ಣೂರು ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಜಗನ್ನಾಥ್​ ವಿರುದ್ಧ ಬನಶಂಕರಿ, ಬಾಗಲೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ‌‌.‌ ಈ ಹಿಂದೆ ಬನಶಂಕರಿ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿದ್ದ‌. ಜಾಮೀನು ಪಡೆದು ಹೊರಬಂದು ಮತ್ತೆ ಹಳೆ ಕಾಯಕವನ್ನೇ ಮುಂದುವರೆಸಿದ್ದ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...