Sat,May18,2024
ಕನ್ನಡ / English

ಪೊಲೀಸ್ ಆಯುಕ್ತರಿಂದ ಥಳಿತ ಆರೋಪ, ಪೊಲೀಸ್ ಕಮೀಷನರ್ ಅಮಾನತಿಗೆ ಸಿದ್ದು ಆಗ್ರಹ | ಜನತಾ ನ್ಯೂಸ್

02 Sep 2021
2068

ಬೆಂಗಳೂರು : ಬುಧವಾರ ತಡರಾತ್ರಿ ಕಲಬುರಗಿ ನಗರದ ಹಫ್ತ್ ಗುಂಬಜ್ ಬಳಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ಮನಬಂದಂತೆ ಕಾಂಗ್ರೆಸ್ ಕಾರ್ಯಕರ್ತನನ್ನು ಥಳಿಸಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿದ ಅವರು, ಕಲಬುರಗಿ ಪೊಲೀಸ್ ಕಮೀಷನರ್ ಕಾಂಗ್ರೆಸ್ ಕಾರ್ಯಕರ್ತನ‌ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಪೊಲೀಸ್ ಕಮೀಷನರ್​​ರನ್ನು ಈ ಕೂಡಲೇ ಅಮಾನತು ಮಾಡುವಂತೆ ಸಿಎಂಗೆ ಆಗ್ರಹಿಸಿದ್ದಾರೆ. ಯಾವುದೇ ತಪ್ಪು ಮಾಡದಿದ್ದರೂ ಹೀಗೆ ಥಳಿಸಿದ್ದು ಖಂಡನೀಯ, ಅಮಾನತು ಮಾಡುವ ಮೂಲಕ ಕಾರ್ಯಕರ್ತನಿಗೆ ನ್ಯಾಯ ಒದಗಿಸಬೇಕು ಎಂದಿದ್ದಾರೆ.

ಕಾಂಗ್ರೆಸ್ ಶಾಸಕಿ ಖನೀಜ್ ಫಾತೀಮಾ ಅವರನ್ನು ಕಳೆದ ರಾತ್ರಿ ಮನೆಗೆ ಬಿಡಲು ತೆರಳುತ್ತಿದ್ದಾಗ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ್ ಅವರು ಕಾರು ತಡೆದು ತಮಗೆ ಥಳಿಸಿದ್ದಾರೆ ಎಂದು ಶಾಸಕರ ಸಹೋದರ ಸಂಬಂಧಿ, ಕಾಂಗ್ರೆಸ್ ಮುಖಂಡ ಆದಿಲ್ ಸುಲೇಮಾನ್ ಆರೋಪಿಸಿದ್ದಾರೆ.

ನಂತರ ನನ್ನನ್ನು ಹಿಡಿದು ಶಾಸಕರ ಹೆಸರು ಹೇಳಿದ ಮೇಲೂ ತಮಗೆ ಮನಬಂದಂತೆ ಥಳಿಸಿದರು. ಅಲ್ಲದೇ, ತಮ್ಮ ಪೊಲೀಸ್ ಸಿಬ್ಬಂದಿಗೆ ನನಗೆ ಹೊಡೆದು ಕಾಲು ಮುರಿಯುವಂತೆ ಹೇಳಿದರು. ಅವರು ಹೊಡೆಯಲು ಹಿಂದೆ-ಮುಂದೆ ನೋಡಿದಾಗ ಆಯುಕ್ತರೇ ಪೊಲೀಸರಿಗೂ ಥಳಿಸಿದರು ಎಂದರು.

ಶಾಸಕಿ ಖನೀಜ್ ಫಾತೀಮಾ ಮಾತನಾಡಿ, ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲುವ ಭಯ ಕಾಡುತ್ತಿದೆ. ಹೀಗಾಗಿ ಪೊಲೀಸರ ಮೇಲೆ ಒತ್ತಡ ಹೇರಿ,‌ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿಸುವ ಕೆಲಸವಾಗುತ್ತದೆ. ಚುನಾವಣೆ ಗೆಲ್ಲಲು ಬಿಜೆಪಿಯವರು ಏನಾಬೇಕಾದರೂ ಮಾಡುತ್ತಾರೆ ಎಂಬುದನ್ನು ಇದು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...