Wed,May08,2024
ಕನ್ನಡ / English

ಬೆಂಗಳೂರು ನಗರ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ; ಆದೇಶ ರದ್ದುಗೊಳಿಸಲು ಸಿದ್ದರಾಮಯ್ಯ ಒತ್ತಾಯ | ಜನತಾ ನ್ಯೂಸ್

03 Sep 2021
1586

ಬೆಂಗಳೂರು : ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದ್ದು, ಇಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ, ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ NEP ಅನುಷ್ಠಾನಗೊಳಿಸಿದರು. ಬೆಂಗಳೂರು ನಗರ ವಿವಿ ಮತ್ತು ಮೌಂಟ್ ಕಾರ್ಮೆಲ್ ಕಾಲೇಜಿನ ಸಹಯೋಗದೊಂದಿಗೆ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ಅವರು, ಹೊಸ ಶಿಕ್ಷಣ ನೀತಿ ಕುರಿತಾದ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದಿದ್ದಾರೆ.

ಪತ್ರದ ವಿವರ ಹೀಗಿದೆ
ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೆ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೆ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ.

ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ.

ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ.

ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ 6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ. ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ.

ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ.

ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆAದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ, ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ?

ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆಮಾಡಬಯಸಿದರೆ, ಕೂಡಲೆ ಈ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೆ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರದ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿದ್ದಾರೆ.

RELATED TOPICS:
English summary :Siddaramaiah

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...