Wed,May15,2024
ಕನ್ನಡ / English

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಒಪ್ಪಿಗೆ, ಷರತ್ತು ಅನ್ವಯ | ಜನತಾ ನ್ಯೂಸ್

05 Sep 2021
2177

ಬೆಂಗಳೂರು : ಕರ್ನಾಟಕ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿಯನ್ನು ನೀಡಿದೆ. ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಒಪ್ಪಿಗೆ ಕೊಡಲಾಗಿದೆ.

ಸಾರ್ವಜನಿಕ ಗಣೇಶೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲು ಅವಕಾಶ ನೀಡಿದರೆ ಅಲ್ಲಿ ಹೆಚ್ಚು ಜನರು ಸೇರುತ್ತಾರೆ. ಆಗ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇರುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಆದ್ದರಿಂದ ತಜ್ಞರ ಜೊತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು ಷರತ್ತು ಬದ್ಧ ಅನುಮತಿ ನೀಡಿದ್ದಾರೆ.

ಜೊತೆಗೇ ಮೂರನೇ ಅಲೆಯ ಭೀತಿ ಕೂಡ ಇದೆ. ಆದ್ದರಿಂದ ಕರೊನಾ ಮುನ್ನೆಚ್ಚರಿಕೆಯ ಕ್ರಮಗಳನ್ನು ಪೂರ್ಣವಾಗಿ ಕೈಗೊಂಡು, ಸೀಮಿತ ಪ್ರಮಾಣದಲ್ಲಿ ಆಚರಣೆ ನಡೆಸಬೇಕು ಎಂದು ಕಂದಾಯ ಸಚಿವ ಆರ್​.ಅಶೋಕ್ ತಿಳಿಸಿದ್ದಾರೆ.

ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಗಣೇಶೋತ್ಸವ ನಡೆಸಲು ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಅಶೋಕ್ ಮಾಹಿತಿ ನೀಡಿದರು.

- ಮೂರು ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕೊಡಲಾಗಿದೆ. ಆದರೆ ಮೆರವಣಿಗೆ ನಡೆಸಲು ಅನುಮತಿ ಇಲ್ಲ. ಸಂಗೀತ, ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ.

- ಗಣೇಶೋತ್ಸವಕ್ಕೆ 50 ಬೈ 50 ಅಡಿ ಪಂಡಾಲ್​ ಹಾಕಬಹುದು. 4 ಅಡಿಗಿಂತ ಹೆಚ್ಚು ದೊಡ್ಡ ಮೂರ್ತಿ ಇಡುವ ಹಾಗಿಲ್ಲ. ಗರಿಷ್ಠ 5 ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಅವಕಾಶವಿರುತ್ತದೆ. ಗಣೇಶೋತ್ಸವಕ್ಕೆ 50 ಕ್ಕಿಂತ ಹೆಚ್ಚು ಜನರು ಸೇರುವ ಹಾಗಿಲ್ಲ.

- ಪ್ರತಿಷ್ಠಾಪನೆ ಮಾಡಿದ ಗಣೇಶಮೂರ್ತಿಗಳನ್ನು ಕೆರೆಗಳಲ್ಲಿ ವಿಸರ್ಜನೆ ಮಾಡಲು ಅವಕಾಶವಿಲ್ಲ. ಬಿಬಿಎಂಪಿ, ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳದಲ್ಲಿಯೇ ವಿಸರ್ಜನೆ ಮಾಡಬೇಕು.

- ಸಾರ್ವಜನಿಕ ಗಣೇಶೋತ್ಸವ ಅತ್ಯಂತ ಸರಳವಾಗಿ ನಡೆಯಬೇಕು. ಒಂದು ಏರಿಯಾದಲ್ಲಿ ಇಂತಿಷ್ಟು ಗಣೇಶವಿಗ್ರಹಗಳನ್ನು ಮಾತ್ರ ಕೂರಿಸಬೇಕು ಎಂದು ಷರತ್ತು ಹಾಕಲಾಗಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಬಿಬಿಎಂಪಿ ಮತ್ತು ಜಿಲ್ಲಾಡಳಿತದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

- ಬಹಳ ಮುಖ್ಯವಾಗಿ, ಯಾವುದೇ ಶಾಲೆ ಅಥವಾ ಕಾಲೇಜುಗಳಲ್ಲಿ ಗಣೇಶ ಮೂರ್ತಿಯನ್ನು ಇಡುವ ಹಾಗಿಲ್ಲ. ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡುವ ಮುನ್ನ ಆಯಾ ಸಂಬಂಧಿತ ಗ್ರಾಮ ಪಂಚಾಯಿತಿ ಅಥವಾ ಪೊಲೀಸ್​ ಠಾಣೆಗಳಲ್ಲಿ ಅನುಮತಿ ಪಡೆದು ಪ್ರತಿಷ್ಠಾಪನೆ ಮಾಡಬೇಕು. ಸರ್ಕಾರ ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದರೆ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

- ಸಾರ್ವಜನಿಕ ಗಣೇಶೋತ್ಸವಗಳು ನಡೆಯುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕರೊನಾ ಲಸಿಕಾ ಅಭಿಯಾನ ನಡೆಸಬೇಕು. ಜಿಲ್ಲಾಡಳಿತ ಈ ಲಸಿಕಾ ಕಾರ್ಯಕ್ರಮ ಆಯೋಜಿಸಲು ಕ್ರಮ ತೆಗೆದುಕೊಳ್ಳಬೇಕು. ಹಾಗೂ ಗಣೇಶ ಪ್ರತಿಷ್ಠಾಪನೆಗೆ ಮುಂದಾಗುವ ಜನರು ಅಥವಾ ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಸದಸ್ಯರು ಕಡ್ಡಾಯವಾಗಿ ಕರೊನಾ ಲಸಿಕೆ ಪಡೆದಿರಬೇಕು. ಇಲ್ಲವೇ ಸ್ಥಳದಲ್ಲೇ ಪಡೆಯಬೇಕು.

RELATED TOPICS:
English summary :Bangalore

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...