Thu,May09,2024
ಕನ್ನಡ / English

ರವಿ ಶಾಸ್ತ್ರಿಗೆ ಕೋವಿಡ್ ಪಾಸಿಟಿವ್: ಟೀಂ ಇಂಡಿಯಾದ ನಾಲ್ವರಿಗೆ ಪ್ರತ್ಯೇಕವಾಸ! | ಜನತಾ ನ್ಯೂಸ್

05 Sep 2021
2522

ನವದೆಹಲಿ : ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅವರ ಕೊರೊನಾ ವೈರಸ್‌ ಪರೀಕ್ಷೆಯಲ್ಲಿ ಪಾಸಿಟಿವ್‌ ಫಲಿತಾಂಶ ಬಂದಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಸ್ತ್ರಿ ಸೇರಿದಂತೆ ಅವರ ನೇರ ಸಂಪರ್ಕದಲ್ಲಿದ್ದ ಟೀಮ್ ಇಂಡಿಯಾದ ಮೂವರು ಸಿಬ್ಬಂದಿಯನ್ನು ಐಸೊಲೇಷನ್‌ಗೆ ಒಳಪಡಿಸಲಾಗಿದೆ.

ಮುಖ್ಯ ಕೋಚ್ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಬಿ.ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್, ಫಿಸಿಯೊಥೆರಪಿಸ್ಟ್ ನಿತಿನ್ ಪಟೇಲ್ ಅವರನ್ನು ವೈದ್ಯಕೀಯ ತಂಡವು ಪ್ರತ್ಯೇಕ ವಾಸದಲ್ಲಿರಿಸಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಪ್ರತ್ಯೇಕವಾಸದಲ್ಲಿರುವವರು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟಿದ್ದು ಹೋಟೆಲ್‌ನಲ್ಲಿಯೇ ಇರಲಿದ್ದಾರೆ. ವೈದ್ಯಕೀಯ ತಂಡವು ಮುಂದಿನ ಸೂಚನೆ ನೀಡುವ ವರೆಗೂ ತಂಡದೊಂದಿಗೆ ಪ್ರಯಾಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಬಿಸಿಸಿಐ ತನ್ನ ಹೇಳಿಕೆಯಲ್ಲಿ, ಬಿಸಿಸಿಐ ವೈದ್ಯಕೀಯ ತಂಡ ರವಿಶಾಸ್ತ್ರಿ, ಭರತ್ ಅರುಣ್, ಆರ್. ಶ್ರೀಧರ್ ಮತ್ತು ನಿತಿನ್ ಪಟೇಲ್ ಅವರನ್ನು ಮುನ್ನೆಚ್ಚರಿಕೆಯಾಗಿ ಪ್ರತ್ಯೇಕಿಸಲಾಗಿದೆ. ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ. ಈ ನಾಲ್ವರು ವೈದ್ಯಕೀಯ ತಂಡದ ದೃಢೀಕರಣವಿಲ್ಲದೆ ತಂಡದೊಂದಿಗೆ ಪ್ರಯಾಣಿಸುವಂತಿಲ್ಲ.

ಓವಲ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಮೈದಾನಕ್ಕೆ ಹೋಗಲು ನೆಗೆಟಿವ್ ಬಂದಿರುವ ಸದಸ್ಯರಿಗೆ ಅನುಮತಿ ನೀಡಲಾಗಿದೆ. ಭಾರತ ತಂಡ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಓವಲ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ಆಡುತ್ತಿದೆ ಮತ್ತು ಇಂದು ಈ ಪಂದ್ಯದ ನಾಲ್ಕನೇ ದಿನವಾಗಿದೆ.

ಉಳಿದ ತಂಡದ ಸದಸ್ಯರ ಫ್ಲೋ ಟೆಸ್ಟ್ ಮಾಡಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಟೀಮ್ ಇಂಡಿಯಾದ ಉಳಿದ ಸದಸ್ಯರಿಗೆ ಎರಡು ಫ್ಲೋ ಪರೀಕ್ಷೆಗಳನ್ನು ಸಹ ಮಾಡಲಾಯಿತು ಒಂದು ನಿನ್ನೆ ರಾತ್ರಿ ಮತ್ತು ಒಂದು ಬೆಳಿಗ್ಗೆ. ಓವಲ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಮೈದಾನಕ್ಕೆ ಹೋಗಲು ನೆಗೆಟಿವ್ ಬಂದಿರುವ ಸದಸ್ಯರಿಗೆ ಅನುಮತಿ ನೀಡಲಾಗಿದೆ.

RELATED TOPICS:
English summary :Ravi Shastri tested positive

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...