Thu,Apr25,2024
ಕನ್ನಡ / English

ಆರ್ಥಿಕ ಕೊರತೆಯ ನೆಪವೊಡ್ಡಿ, ಸರಕಾರ ಮಹಿಳಾ ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಿರುವುದು ಅಕ್ಷಮ್ಯ: ಸಿದ್ದರಾಮಯ್ಯ | ಜನತಾ ನ್ಯೂಸ್

06 Sep 2021
1647

ಬೆಂಗಳೂರು : ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲು ಕೈಗೊಂಡಿರುವ ತೀರ್ಮಾನ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ನೊಂದ ಮತ್ತು ತುರ್ತು ಅಗತ್ಯ ಇರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ಆರ್ಥಿಕ ನೆರವು, ಶಿಕ್ಷಣ, ಉದ್ಯೋಗ, ಉಚಿತ ಕಾನೂನು ನೆರವು ಸೇರಿದಂತೆ ಹಲವು ರೀತಿಯ ಸಹಾಯ ಒಂದೇ ಸೂರಿನ ಅಡಿಯಲ್ಲಿ ಸಿಗಬೇಕು ಎನ್ನುವ ಕಾಳಜಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಂತ್ವನ ಕೇಂದ್ರಗಳನ್ನು ನಿರ್ವಹಿಸಲಾಗುತಿತ್ತು.

ಸ್ವಯಂ ಸೇವಾ ಸಂಸ್ಥೆಗಳ ನೆರವಿನಿಂದ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದವು. ಸಾಂತ್ವನ ಕೇಂದ್ರಗಳ ಆಪ್ತ ಸಮಾಲೋಚಕರಿಂದ ಇದುವರೆಗೂ ಸಹಸ್ರಾರು ಮಹಿಳೆಯರು ಸಾಂತ್ವನ ಮತ್ತು ಭರವಸೆ ಪಡೆದುಕೊಂಡಿದ್ದಾರೆ. ಈ ಕೇಂದ್ರಗಳು ನೊಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ ಆತ್ಮಹತ್ಯೆ, ಖಿನ್ನತೆ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುತ್ತಿದ್ದವು.

ಈಗ ಕೋವಿಡ್ ನೆಪದಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣ ಹೇಳಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿದೆ. ರಾಜಧಾನಿ ಬೆಂಗಳೂರು ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೀಗಿದ್ದೂ ಬೆಂಗಳೂರು ನಗರದಲ್ಲಿದ್ದ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಿರುವುದು ಅಕ್ಷಮ್ಯ ಎಂದಿದ್ದಾರೆ.

ಹೀಗಾಗಿ ಬಂದ್ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

RELATED TOPICS:
English summary :Siddaramaiah

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...