ಟ್ಯಾಂಕರ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ : ಬಾಲಕನೋರ್ವ ಸ್ಥಳದಲ್ಲೇ ಮೃತ, ತಾಯಿಗೆ ಗಾಯ! | ಜನತಾ ನ್ಯೂಸ್
ದಕ್ಷಿಣ ಕನ್ನಡ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟರೆ, ಎಂಜಿರ ಎಂಬಲ್ಲಿ ಕಂಟೈನರ್ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಉಪ್ಪಿನಂಗಡಿ ಸೇಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಅಧ್ವಿತ್ (15) ಮೃತ ಬಾಲಕ. ಈತ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ರಿಕ್ಷಾ ಚಾಲಕ ಜನಾರ್ದನ ಹಾಗೂ ಉಜ್ರುಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅನುರಾಧಾ ಅವರ ಪುತ್ರ.
ಎಸ್ಸೆಸ್ಸೆಲ್ಸಿ ಕಲಿಯುತ್ತಿರುವ ಅಧ್ವಿತ್ ತರಗತಿ ಪರೀಕ್ಷೆಯ ಪುಸ್ತಕವನ್ನು ಶಾಲೆಗೆ ಕೊಡುವ ಸಲುವಾಗಿ ತಾಯಿ ಜತೆ ಸ್ಕೂಟರ್ನಲ್ಲಿ ಹೋಗಿದ್ದರು. ಶಾಲೆಯಲ್ಲಿ ಪುಸ್ತಕ ಕೊಟ್ಟು ಬರುವಾಗ ಈ ಅವಘಡ ಸಂಭವಿಸಿದೆ.
ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಲ್ಲೇರಿ ನಿವಾಸಿ ಅದ್ವೀತ್ (16) ಮೃತ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಬೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.