Fri,May10,2024
ಕನ್ನಡ / English

ಸೋಲು- ಗೆಲುವು ಅಂತಾ ನೋಡಿ ಕುಳಿತುಕೊಳ್ಳಲು ಆಗುವುದಿಲ್ಲ: ಎಚ್ ಡಿ ದೇವೇಗೌಡ | ಜನತಾ ನ್ಯೂಸ್

07 Sep 2021
1857

ಬೆಂಗಳೂರು : ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ. ಈ ಬಗ್ಗೆ ಯಾರೂ ನಿರಾಶರಾಗಬೇಕಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು.

ಕಲಬುರಗಿ ಮಹಾನಗರ ವ್ಯಾಪ್ತಿಯ ಜೆಡಿಎಸ್ ಮುಖಂಡರ ಅಭಿಪ್ರಾಯ ಪಡೆಯದೇ ನಾವೇ ನಿರ್ಧಾರ ಮಾಡಬಾರದು ಎಂದು ಕುಮಾರಸ್ವಾಮಿಗೂ ಸೂಚಿಸಿದ್ದೇನೆ ಎಂದು ಜೆಡಿಎಸ್ ವರಿಷ್ಠರೂ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಪ್ರತಿಕ್ರಿಯಿಸಿದರು.

ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸೀಟ್ ಬರುತ್ತದೆಂದು ಲೆಕ್ಕ ಹಾಕಿರಲಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಅಲ್ಲಿಗೆ ಹೋಗಿ ಸ್ಥಳೀಯ ಮುಖಂಡರನ್ನು ಸೇರಿಸಿ ಸಭೆ ಮಾಡಿದ್ದರು. 15 ಸೀಟು ಗೆಲ್ಲುತ್ತೇವೆ ಅಂತ ಅಂದುಕೊಂಡಿದ್ದರು ಎಂದರು.

ಎಲ್ಲಿಯೂ ಇಲ್ಲವೇ ಇಲ್ಲ ಅನ್ನುವ ಸ್ಥಿತಿ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ನಮ್ಮ ಸ್ಥಿತಿ ಚೆನ್ನಾಗಿರಲಿಲ್ಲ. ಅಲ್ಲಿ ಬಿಜೆಪಿ ಸ್ವೀಪ್ ಮಾಡಿದೆ, ಕಾಂಗ್ರೆಸ್ ಬಗ್ಗೆ ಮಾತಾಡಲು ಹೋಗುವುದಿಲ್ಲ. ಹುಬ್ಬಳ್ಳಿ ಧಾರವಾಡದಲ್ಲಿ ಮೂರು- ನಾಲ್ಕು ಸೀಟ್ ನಿರೀಕ್ಷೆ ಮಾಡಿದ್ದೇವು, ಒಂದು ಸೀಟ್ ಬಂದಿದೆ , ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕೆಲ ಕಡೆ ಪೈಪೋಟಿ ಕೊಟ್ಟಿದ್ದೇವೆ ಎಂದರು.

ಯಾರೂ ನಿರಾಶೆಯಾಗಬೇಕಿಲ್ಲ, ನಾವು ಹೆಚ್ಚಿನ ಸದಸ್ಯತ್ವ ನೋಂದಣಿ ಬಗ್ಗೆ ಗಮನ ಕೊಡುತ್ತೇವೆ. ಪಕ್ಷ ಕಟ್ಟುವ ಕಡೆ ಹೆಚ್ಚು ಗಮನ ಕೊಡುತ್ತೇವೆ. ನಾನು ಮತ್ತು ಪಕ್ಷದ ಎಲ್ಲಾ ನಾಯಕರು ಒಳಗೊಂಡಂತೆ ಪಕ್ಷ ಕಟ್ಟುವ ಕೆಲಸಕ್ಕೆ ಆದ್ಯತೆ ಕೊಡುತ್ತೇವೆ, ಒಟ್ಟಾಗಿ ಐಕ್ಯತೆಯಿಂದ ಪಕ್ಷ ಸಂಘಟನೆ ಮಾಡುತ್ತೇವೆ. ಸೋಲು- ಗೆಲುವು ಅಂತಾ ನೋಡಿ ಕುಳಿತುಕೊಳ್ಳಲು ಆಗುವುದಿಲ್ಲ. ಸೋಲು-ಗೆಲುವು, ಸಿಹಿ-ಕಹಿ ನೋಡಿದ್ದೇವೆ ನಾವು ಎಂದು ಎಚ್ ಡಿಡಿ ಹೇಳಿದರು.

ಬಿಜೆಪಿಯವರು ನನ್ನ ಜೊತೆ ಯಾರೂ ಮಾತಾನಾಡಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ಪಕ್ಷದವರನ್ನೇ ಸಂಪರ್ಕಿಸಿ ಮಾತಾಡಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಖರ್ಗೆ ಕೂತು ಮಾತಾಡುತ್ತಾರೆ ನೋಡೋಣವೆಂದರು. ಸಿಎಂ ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಮಾತಾಡಿರಬಹುದು, ನನ್ನ ಜೊತೆ ಬಿಜೆಪಿಯ ಯಾವ ನಾಯಕರು ಮಾತನಾಡಿಲ್ಲ, ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

RELATED TOPICS:
English summary :H D Devegowda

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...