ಉತ್ತರ ಪ್ರದೇಶ : ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಶೋಭಾ ಕರಂದ್ಲಾಜೆ ನೇಮಕ | ಜನತಾ ನ್ಯೂಸ್
ಬೆಂಗಳೂರು : ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಸಹ ಪ್ರಭಾರಿಯಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಲಾಗಿದೆ.
ಬುಧವಾರ ಬಿಜೆಪಿ ಈ ಕುರಿತು ಆದೇಶ ಹೊರಡಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಇವರ ಜೊತೆ ಐವರು ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ.
ಅನುರಾಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಅನ್ನಪ್ರಾಣಾ ದೇವಿ ಮತ್ತು ಶೋಭಾ ಕರಂದ್ಲಾಜೆ ಸಹ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.
RELATED TOPICS:
English summary :Shobha Karandlaje