Sat,Apr20,2024
ಕನ್ನಡ / English

ಬಾಗಿನ ಕೊಟ್ಟು ಬರುತ್ತಿದ್ದ ವೇಳೆ ಭೀಕರ ಅಪಘಾತ, ತಂದೆ-ಮಗಳು ಸಾವು | ಜನತಾ ನ್ಯೂಸ್

09 Sep 2021
4621

ಚಿಕ್ಕಮಗಳೂರು : ಹಿರಿಮಗಳಿಗೆ ಬಾಗಿನ ಕೊಟ್ಟು ವಾಪಸ್ ಸ್ವಗ್ರಾಮಕ್ಕೆ ತೆರಳುತ್ತಿದ್ದ ತಂದೆ ಮತ್ತು ಕಿರಿಮಗಳಿಬ್ಬರು ಮಾರ್ಗಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅಪ್ಪ-ಮಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿಯಲ್ಲಿ ನಡೆದಿದೆ.

ಮುಗುಳವಳ್ಳಿ‌ ಮೂಲದ ಜಯಣ್ಣ(58) ಮತ್ತು ರಕ್ಷಿತಾ (19) ಮೃತ ದುರ್ದೈವಿಗಳು. ಗೌರಿಹಬ್ಬದ ಪ್ರಯುಕ್ತ ಜಯಣ್ಣ ಅವರು ತನ್ನ ಕಿರಿಮಗಳ ಜತೆ ಪಿಳ್ಳೇನಹಳ್ಳಿಯಲ್ಲಿದ್ದ ಹಿರಿಮಗಳಿಗೆ ಬಾಗಿನ ಕೊಡಲು ಹೋಗಿದ್ದರು. ಮಗಳಿಗೆ ಬಾಗಿನ ಕೊಟ್ಟು ಇಬ್ಬರೂ ಪಿಳ್ಳೇನಹಳ್ಳಿಯಿಂದ ಮುಗುಳವಳ್ಳಿ‌ಗೆ ದ್ವಿಚಕ್ರ ವಾಹನದಲ್ಲಿ ವಾಪಸ್​ ಆಗುತ್ತಿದ್ದರು.

ಉದ್ದೇಬೋರನಹಳ್ಳಿ ಗ್ರಾಮದ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬಂದ ಗ್ಯಾಸ್ ಸಿಲಿಂಡರ್ ಸಾಗಣೆ ಲಾರಿ ಬೈಕ್‍ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಬೈಕ್‍ನಲ್ಲಿದ್ದ ಅಪ್ಪ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‍ಗೆ ಢಿಕ್ಕಿ ಹೊಡೆದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸಖರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Chikkamagaluru

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...