Tue,Apr23,2024
ಕನ್ನಡ / English

ನಂಜನಗೂಡಿನಲ್ಲಿ ದೇವಸ್ಥಾನ ನೆಲಸಮ: ಬಿಜೆಪಿಯಿಂದ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ | ಜನತಾ ನ್ಯೂಸ್

11 Sep 2021
1703

ಮೈಸೂರು : ನಂಜನಗೂಡುನ ಐತಿಹಾಸಿಕ ಹಿಂದೂ ದೇವಸ್ಥಾನ ನೆಲಸಮ ಗೊಳಿಸಿರುವ ಕ್ರಮವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ ಎಂದು ಟೀಕಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಯವರಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು, ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಬಿಜೆಪಿಯವರು, ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು.

ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು. ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯ ಸರ್ಕಾರವೇ ನಿರ್ಮಿಸಿ ಕೊಡಬೇಕು.

ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ದೇವಸ್ಥಾನ ತೆರವುಗೊಳಿಸಿದ್ದಕ್ಕೆ ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯನವರು, ಬಿಜೆಪಿ ಸರ್ಕಾರವು ಹಿಂದೂ ಧಾರ್ಮಿಕ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ. ಶೀ‍ಘ್ರವೆ ದೇವಸ್ಥಾನ ಮರುಸ್ಥಾಪನೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

RELATED TOPICS:
English summary :Siddaramaiah

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...