ಬಿಎಸ್ವೈ ಭೇಟಿಯಾದ ಕಟೀಲ್ : ರಾಜ್ಯ ಪ್ರವಾಸ ಸೇರಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ! | ಜನತಾ ನ್ಯೂಸ್
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸಲು ಉದ್ದೇಶಿಸಿರುವ ಹಿನ್ನೆಲೆ ಕಟೀಲ್ ಭೇಟಿ ಕುತೂಹಲ ಮೂಡಿಸಿದೆ.
ಬಿ.ಎಸ್. ಯಡಿಯೂರಪ್ಪರ ಸರ್ಕಾರಿ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ಕಟೀಲ್, ಭೇಟಿಯ ವೇಳೆ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಕುರಿತಾಗಿ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಬಿಜೆಪಿ ಪಕ್ಷ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಎಂದಿದ್ದಾರೆ.