ಕೋವಿಡ್ ವರ್ಷ ಎಂದು ಘೋಷಿಸಿ, ಬಡವರ ಹೊಟ್ಟೆಗೆ ಊಟ ಕೊಡುವ ಕೆಲಸ ಮಾಡಿ: ಕುಮಾರಸ್ವಾಮಿ | ಜನತಾ ನ್ಯೂಸ್

16 Sep 2021
589

ಬೆಂಗಳೂರು : ಅಮೃತ ಯೋಜನೆ ಘೋಷಣೆ ಮಾಡಿದ್ದೀರಿ. ಅದನ್ನು ನಿಲ್ಲಿಸಿ, ಬಡವರ ಹೊಟ್ಟೆಗೆ ಊಟ ಕೊಡುವ ಕೆಲಸ ಮಾಡಿ. ಬಡವರಿಗೆ ಯಾವುದೇ ಕಂಪನಿಗಳು ನೆರವು ನೀಡುವುದಿಲ್ಲ. ಸಣ್ಣಪುಟ್ಟ ಕೈಗಾರಿಕೆಗಳಿಗೆ ಆದ್ಯತೆ ನೀಡಿದರೆ, ಅವರು ಲಕ್ಷಾಂತರ ಜನರಿಗೆ ಉದ್ಯೋಗ ನೀಡುತ್ತಾರೆ. ಕೋವಿಡ್ ವರ್ಷ ಎಂದು ಘೋಷಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯ ಕುರಿತ ಮುಂದುವರಿದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೈಲ ಹಾಗೂ ಅಡುಗೆ ಅನಿಲ ಮತ್ತಿತರ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸವಾಗುತ್ತಿದೆ. ಇದರಿಂದ ಎಷ್ಟು ಹಿರಿಯಬಹುದು ಎಂಬ ಉದ್ದೇಶದಿಂದ ಹೆಚ್ಚಿನ ತೆರಿಗೆ ವಿಧಿಸಿ ವಸೂಲು ಮಾಡಲಾಗುತ್ತಿದೆ ಎಂದರು.

ಕಷ್ಟದಲ್ಲಿರುವವರ ನೆರವಿಗೆ ಬರುವುದು ಸರ್ಕಾರದ ಕೆಲಸ. ಆದರೆ ಬೆಲೆ ಏರಿಕೆ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತ್ಯಂತ ನಿರ್ದಯವಾಗಿ ವರ್ತಿಸುತ್ತಿವೆ. ಇದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರೆಡು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಬಿಕ್ಕಟ್ಟನ್ನು ಸರಕಾರ ಉಪೇಕ್ಷೆ ಮಾಡಬಾರದು. ಈ ವರ್ಷವನ್ನು "ಕೋವಿಡ್ ವರ್ಷ" ಎಂದು ಘೋಷಣೆ ಮಾಡಿ. ಕಷ್ಟದಲ್ಲಿರುವ 55 ಲಕ್ಷ ಬಡ ಕುಟುಂಬಗಳಿಗೆ ನೆರವಾಗಿ. ಕೊನೆಯ ಪಕ್ಷ ಪ್ರತಿ ಕುಟುಂಬಕ್ಕೆ 25,000 ರೂ. ಧನ ಸಹಾಯ ಮಾಡಿ. ಅಗತ್ಯಬಿದ್ದರೆ ಈ ವರ್ಷ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ.

ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಇಂಧನ ಬೆಲೆ ಏರಿಕೆ ಹಾಗೂ ಕೋವಿಡ್ ನಿಂದ ತತ್ತರಿಸಿರುವ ಜನರಿಗೆ ಬದುಕು ಕಟ್ಟಲು ಒಂದು ಬಾರಿಗೆ ಅನ್ವಯವಾಗುವಂತೆ 55 ಲಕ್ಷ ಕುಟುಂಬಗಳಿಗೆ ತಲಾ 25,000 ರೂ. ಪರಿಹಾರ ನೀಡುವಂತೆ ಅವರು ಆಗ್ರಹಪಡಿಸಿದ್ದಾರೆ.

ಈ ಬೆಲೆ ಏರಿಕೆಯನ್ನೂ ಯಾರೂ ಒಪ್ಪಲು ಸಾಧ್ಯವೇ ಇಲ್ಲ. ಇದು ಅತ್ಯಂತ ನಿರ್ದಯವಾದ ಕೆಲಸ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವುದು ಸರಕಾರದ ಕೆಲಸ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಚ್ಚೆತ್ತುಕೊಳ್ಳಬೇಕು.

ಸರಕಾರಕ್ಕೆ ಆದಾಯವೂ ಮುಖ್ಯ, ನಿಜ. ಅದೇ ರೀತಿ ಜನರ ಕಲ್ಯಾಣವೂ ಮುಖ್ಯ. ಹಾಗಂತ ಮನಸೋ ಇಚ್ಛೆ ತೆರಿಗೆ ಹಾಕುವುದಲ್ಲ. ಜನರಿಗೆ ಬದುಕೇ ದುಸ್ಥರವಾಗಿದೆ. ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂಥ ತೀವ್ರ ಸಂಕಷ್ಟದ ಸಮಯದಲ್ಲಿ ಜನರ ಮೇಲೆ ಬೆಲೆ ಏರಿಕೆ ಪ್ರಹಾರ ಮತ್ತು ತರಿಗೆ ಪ್ರಹಾರ ನಡೆಸುವುದು ಎಷ್ಟು ಸರಿ?

ಯಾವುದೇ ಸರ್ಕಾರಕ್ಕೆ ಆದಾಯ ಮುಖ್ಯ.ಹಾಗೆಯೇ ಜನ ಕಲ್ಯಾಣವೂ ಮುಖ್ಯ. ಹಾಗೆಂದು ಮನಸ್ಸಿಗೆ ಬಂದಂತೆ ತೆರಿಗೆ ಹಾಕುವುದು ಸರಿಯಲ್ಲ. ಜನರ ಬದುಕು ದುಸ್ತರವಾಗಿದೆ.ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಬೆಲೆ ಏರಿಕೆ ಮತ್ತು ತೆರಿಗೆ ಪ್ರಹಾರ ಎಷ್ಟು ಸರಿ ಎಂದು ಪ್ರಶ್ನಿಸಿದರು.

RELATED TOPICS:
English summary :H D Kumaraswamy

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...