ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ! | ಜನತಾ ನ್ಯೂಸ್
ಬೆಂಗಳೂರು : 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ, ಖಾಸಗಿ ಮತ್ತು ಅನುದಾನಿತ ಶಾಲೆಗಳು ಶೇ.70ರಷ್ಟು ಮಾತ್ರ ಶುಲ್ಕ ಸ್ವೀಕರಿಸಬೇಕು, ಶೇ.30ರಷ್ಟು ರಿಯಾಯಿತಿ ನೀಡಬೇಕೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಶಾಲಾ ಶುಲ್ಕ ವಿವಾದಕ್ಕೆ ಸಂಬಂಧಿದಂತೆ ಸರ್ಕಾರದ ತೀರ್ಮಾನ ಪ್ರಶ್ನಿಸಿ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ದೇವದಾಸ್ ಆರ್. ಅವರು ಇತರೆ ರಾಜ್ಯಗಳ ಶಾಲಾ ಶುಲ್ಕ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿ ರಾಜ್ಯದಲ್ಲಿ 2019- 20 ನೇ ಸಾಲಿನ ಶಾಲಾ ಶುಲ್ಕವನ್ನು ಶೇ. 15 ರಷ್ಟು ಕಡಿತ ಮಾಡುವಂತೆ ತೀರ್ಪು ನೀಡಿದ್ದಾರೆ.
ಮಾತ್ರವಲ್ಲದೇ ಖಾಸಗಿ ಶಾಲೆಗಳ ಶುಲ್ಕ ನಿಗಧಿ ವಿಚಾರದಲ್ಲಿ ಸರ್ಕಾರ ಮೂಗು ತೂರಿಸಬಾರದು ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಾಜ್ಯದಲ್ಲಿ ಶಾಲಾ ಶುಲ್ಕದಲ್ಲಿ ಎದ್ದಿದ್ದ ದೊಡ್ಡ ಗೊಂದಲಕ್ಕೆ ನ್ಯಾಯಾಲಯ ತೆರೆ ಎಳೆದಿದೆ.