ಕೇವಲ 20ರೂ.ಗಾಗಿ ಸ್ನೇಹಿತನ ಕೊಲೆ, ಮೂವರು ಆರೋಪಿಗಳ ಸೆರೆ! | ಜನತಾ ನ್ಯೂಸ್

17 Sep 2021
518

ಬೆಂಗಳೂರು : ಚಿಂದಿ ಆಯುವವರ ನಡುವೆ ಜಗಳ ಉಂಟಾಗಿ, ಕೊಲೆಯಲ್ಲಿ ಅಂತ್ಯವಾಗಿದ್ದ ಪ್ರಕರಣವನ್ನು ಬೊಮ್ಮನಹಳ್ಳಿ ಠಾಣಾ ಪೊಲೀಸರು ಭೇದಿಸಿದ್ದಾರೆ.

ಅಸ್ಸಾಂ ಮೂಲದ ಸಂಜಯ್ ಅಲಿಯಾಸ್ ಅಸ್ಸಾಮಿ(35)ಯನ್ನು ಕೊಲೆ ಮಾಡಿದ್ದ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ತಮಿಳುನಾಡು ಮೂಲದ ದೀಪಕ್, ಹೇಮಂತ್ ಮತ್ತು ಮಹದೇಶನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾಗಿರುವ ಸಂಜಯ್ ಹಾಗೂ ಆರೋಪಿಗಳೆಲ್ಲಾ ಸ್ನೇಹಿತರು. ಇವರೆಲ್ಲಾ ಚಿಂದಿ ಆಯುತ್ತಾ ಎಲ್ಲೆಂದರಲ್ಲಿ ಮಲಗಿ ಕಾಲಕಳೆಯುತ್ತಿದ್ದರು. ಸೆ.13ರಂದು ರಾತ್ರಿ 9.45ರಲ್ಲಿ ಸಂಜಯ್ ಬಾರ್‍ವೊಂದಕ್ಕೆ ಸ್ನೇಹಿತನನ್ನು ಕರೆದುಕೊಂಡು ಹೋಗಿದ್ದು, ಬೆಳಗಾಗುವಷ್ಟರಲ್ಲಿ ಬೊಮ್ಮನಹಳ್ಳಿ ಮುಖ್ಯರಸ್ತೆಯ ಬಾರ್ ಪಕ್ಕದ ಗಲ್ಲಿಯಲ್ಲಿ ಸಂಜಯ್‍ನನ್ನು ಕೊಲೆ ಮಾಡಲಾಗಿದೆ.

ಇದೇ ತಿಂಗಳು ಸೆ.13 ರಂದು ಬೊಮ್ಮನಹಳ್ಳಿ ಮುಖ್ಯರಸ್ತೆಯಲ್ಲಿನ ವೈನ್ ಸ್ಟೋರ್​ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ಸಂಜಯ್ ಶವ ಪತ್ತೆಯಾಗಿತ್ತು‌. ಸ್ಥಳದಲ್ಲಿ ಕೊಲೆಯಾದ ಬಗ್ಗೆ ಯಾವುದೇ ಸುಳಿವು ದೊರೆತಿರಲಿಲ್ಲ. ಈ ಸಂಬಂಧ ನಾರಾಯಣರೆಡ್ಡಿ ಎಂಬುವವರು ‌ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಬೊಮ್ಮನಹಳ್ಳಿ ಪೊಲೀಸರು ವೈನ್ ಶಾಪ್​ನ ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿನ ಸಿಸಿ ಟಿವಿ ಪುಟೇಜ್‍ಗಳನ್ನು ಪಡೆದುಕೊಂಡು ಪರಿಶೀಲಿಸಿದಾಗ ಬಾರ್‍ವೊಂದಕ್ಕೆ ಹೋಗಿ ವಾಪಸ್ ಅಂಗಡಿಯಿಂದ ಸಂಜಯ್ ಮತ್ತೊಬ್ಬ ವ್ಯಕ್ತಿಯೊಂದಿಗೆ ಹೊರ ಬಂದಿರುವುದನ್ನು ಗಮನಿಸಿ ಆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದರು. ಪ್ರಮುಖ ಆರೋಪಿ ದೀಪಕ್ ತನ್ನ ಜತೆ ಇನ್ನಿಬ್ಬರು ಚಿಂದಿ ಆಯುವವರೊಂದಿಗೆ ಸೇರಿಕೊಂಡು ಸಂಜಯ್‍ನನ್ನು ಕೊಲೆ ಮಾಡಿದ್ದಾಗಿ ಬಾಯಿ ಬಿಟ್ಟಿದ್ದಾನೆ. ಈತನ ಹೇಳಿಕೆ ಆಧರಿಸಿ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ದೀಪಕ್ ಬಳಿ ಸಂಜಯ್ 20 ರೂ. ಹಣವನ್ನು ಸಾಲವಾಗಿ ಪಡೆದಿದ್ದ. ಸೆ.13ರಂದು ರಾತ್ರಿ ಇವರೆಲ್ಲ ಒಂದೆಡೆ ಕೂತು ಊಟ ಮಾಡುತ್ತಿದ್ದಾಗ ದೀಪಕ್ ಹಣ ಕೇಳಿದ್ದಾನೆ. ಕ್ಷುಲ್ಲಕ ವಿಚಾರಕ್ಕಾಗಿ ಜಗಳ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ಆ ಸಂದರ್ಭದಲ್ಲಿ ದೀಪಕ್ ತನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಫೋಟೋ ಪ್ರೇಮ್ ಪಟ್ಟಿಯಿಂದ ಸಂಜಯ್‍ನ ತಲೆ, ಕುತ್ತಿಗೆಗೆ ಹೊಡೆದಿದ್ದಾರೆ. ಅಲ್ಲದೆ, ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...