Sun,May19,2024
ಕನ್ನಡ / English

71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ, ಸೇವಾ ದಿವಸ್ ಆಚರಣೆ, ಗಣ್ಯಾತಿಗಣ್ಯರ ಶುಭಾಶಯ! | ಜನತಾ ನ್ಯೂಸ್

17 Sep 2021
2666

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು 71ನೇ ವಸಂತಕ್ಕೆ ಕಾಲಿಟಿದ್ದಾರೆ. ನರೇಂದ್ರ ಮೋದಿ ಅವರು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ರಾಹುಲ್ ಗಾಂಧಿ ಸೇರಿಂದತೆ ಹಲವು ಗಣ್ಯರು ಮೋದಿ ಅವರಿಗೆ ವಿಶ್ ಮಾಡಿದ್ದಾರೆ.

2014ರಿಂದ ಪ್ರತಿ ವರ್ಷ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಸೇವಾ ದಿವಸ್​ ಆಗಿ ಬಿಜೆಪಿ ಕಾರ್ಯಕರ್ತರು ಆಚರಿಸುತ್ತಾರೆ. ಅದೇ ರೀತಿ ಈ ಬಾರಿಯೂ ಆಚರಣೆಗೆ ಬಿಜೆಪಿ ಮುಂದಾಗಿದ್ದು, ಸುಮಾರು 20 ದಿನಗಳ ಕಾಲ ಸೇವಾ ದಿವಸ್ ಆಚರಿಸಲಾಗುತ್ತದೆ.

ಸದೃಢ, ಸಶಕ್ತ, ಸಮರ್ಥ ನವಭಾರತ ನಿರ್ಮಾಣದೆಡೆಗೆ ದೇಶವನ್ನು ಮುನ್ನಡೆಸುತ್ತಿರುವ ತಮಗೆ, ದೇವರು ಆರೋಗ್ಯ, ದೀರ್ಘಾಯುಷ್ಯ ನೀಡಿ ತಮ್ಮ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ ಕರುಣಿಸಲಿ ಎಂದು ಸಿಎಂ ಬಸವರಾಜ್​​ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಶುಭಾಶಯಗಳು ಕೋರಿದ್ದಾರೆ. ಸ್ವಾತಂತ್ರ್ಯದ ನಂತರ ಭಾರತಕ್ಕೆ ದೊರೆತ ಒಬ್ಬ ದಿಟ್ಟ ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಹೊಸ ಭಾರತ ಕಟ್ಟಲು ಅಣಿಯಾಗಿರುವಂತಹ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಎಂದಿದ್ದಾರೆ.

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ನಾನು ನಿಮ್ಮ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ನಿಮ್ಮಲ್ಲಿರುವ ಸೇವಾ ಮನೋಭಾವದಿಂದ ರಾಷ್ಟ್ರ ಸೇವೆಯನ್ನು ಮುಂದುವರೆಸಿ ಎಂದು ರಾಮನಾಥ್ ಕೋವಿಂದ್ ಅವರು ಹೇಳಿದ್ದಾರೆ.

ಹ್ಯಾಪಿ ಬರ್ತ ಡೇ ಮೋದಿಜಿ ಎಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ, ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

71ನೇ ವಸಂತಕ್ಕೆ ಕಾಲಿಟ್ಟಿರುವ ಪ್ರಧಾನ ಮಂತ್ರಿ ನರೆಂದ್ರ ಮೋದಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ದೇವರು ಉತ್ತಮ ಆರೋಗ್ಯ ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಜೊತೆಗೆ ನಿಮ್ಮ ಈ ನಾಯಕತ್ವವು ರಾಷ್ಟ್ರದ ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಎಂದು ಮಾಜಿ ಪ್ರಧಾನಿ ದೇವೇಗೌಡ ​ಟ್ವೀಟ್​ ಮಾಡಿದ್ದಾರೆ.

ನಮ್ಮ ಪ್ರಧಾನಿಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ದೇವರು ದೇಶ ಸೇವೆ ಮುಂದುವರಿಸಲು ಮೋದಿಗೆ ಹೆಚ್ಚಿನ ಶಕ್ತಿ, ಸ್ಫೂರ್ತಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್​ಡಿಕೆ ಟ್ವೀಟ್​ ಮಾಡಿದ್ದಾರೆ.

ಭಾರತದ ಕ್ರಿಕೆಟ್​ ದಂತಕತೆ ಮಾಸ್ಟರ್​ ಬ್ಲಾಸ್ಟರ್​ ಸಚಿನ್​ ತೆಂಡೂಲ್ಕರ್​ ಪ್ರಧಾನ ಮಂತ್ರಿ ಮೋದಿಯವರಿಗೆ ಟ್ವೀಟ್​ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ. ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು, ನಿಮಗೆ ಈ ವರ್ಷ ಉತ್ತಮ ಆರೋಗ್ಯ ಮತ್ತು ಸಂತೋಷದಿಂದ ಕೂಡಿರಲಿ ಎಂದು ಹಾರೈಸುತ್ತೇನೆ. ಎಂದು ಟ್ವೀಟ್​ ಮಾಡಿದ್ದಾರೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಟ್ವೀಟ್ ಮಾಡಿ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಅಸಾಧಾರಣ ದೃಷ್ಟಿಕೋನ, ಅನುಕರಣೀಯ ನಾಯಕತ್ವ ಮತ್ತು ಸಮರ್ಪಿತ ಸೇವೆಯು ರಾಷ್ಟ್ರದ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿದೆ. ದೇವರು ಅವರಿಗೆ ಆರೋಗ್ಯ, ಆಯಸ್ಸು, ಸಂತೋಷವನ್ನು ನೀಡಲಿ ಎಂದು ತಿಳಿಸಿದ್ದಾರೆ.

RELATED TOPICS:
English summary :PM Modi Birthday

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...