Thu,Apr18,2024
ಕನ್ನಡ / English

ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂಸ್

20 Sep 2021
1989

ಬೆಂಗಳೂರು : ಭಾರತೀಯ ಸೇನಾಧಿಕಾರಿ ವೇಷ ಧರಿಸಿಕೊಂಡು ಓಡಾಡಿ ಸೇನೆಗೆ ಸಂಬಂಧಪಟ್ಟ ಸ್ಥಳಗಳ ಫೋಟೊ ಸಮೇತ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐಗೆ ಕಳುಹಿಸುತ್ತಿದ್ದ ಆರೋಪದಡಿ ಜಿತೇಂದರ್ ಸಿಂಗ್ ಎಂಬಾತನನ್ನು ಬೆಂಗಳೂರಿನಲ್ಲಿ ಸೋಮವಾರ ಬಂಧಿಸಲಾಗಿದೆ.

ಕಾಟನ್ ಪೇಟೆಯಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಈತ ಸೇನಾಧಿರಿಸು ಧರಿಸಿ ವಂಚನೆಗೆ ಇಳಿದಿದ್ದು, ಇಂದು ಮಿಲಿಟರಿ ಇಂಟಲಿಜೆನ್ಸ್ ಹಾಗೂ ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯ ವೇಳೆ ಸಿಕ್ಕಿಬಿದ್ದಿದ್ದಾನೆ.

ಆರ್ಮಿ ಕಮಾಂಡೊ ಯುನಿಫಾರ್ಮ್ ಧರಿಸಿ ಆಪರೇಟ್ ಮಾಡ್ತಿದ್ದ ಆರೋಪಿ ಜಿತೆಂದರ್ ಸಿಂಗ್ ವಾಟ್ಸ್ ಆಪ್ ವಿಡಿಯೋ, ವಾಟ್ಸ್ ಆಪ್ ಮೆಸೆಜ್, ವಾಟ್ಸ್ ಆಪ್ ಕಾಲ್ ಮೂಲಕ ಸಂಪರ್ಕ ಹೊಂದಿದ್ದ. ಈತ ಬಾರ್ಮೆರ್ ಮಿಲಿಟರಿ ಸ್ಟೆಶನ್ ಹಾಗೂ ಮಿಲಿಟರಿ ವಾಹನಗಳ ಓಡಾಟದ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡಿದ್ದ ಎನ್ನಲಾಗಿದೆ. ಆರ್ಮಿಗೆ ಸಂಬಂಧಿಸಿದ ಫೋಟೊಸ್ ಮತ್ತು ಮಾಹಿತಿ ರವಾನಿಸಿದ್ದ ಅರೋಪಿ.

ಭಾರತೀಯ ಸೇನೆಗೆ ಸಂಬಂಧಿಸಿದ ಅಂತರಾಷ್ಟ್ರೀಯ ಗಡಿ ಪ್ರದೇಶದ ಫೋಟೊಗಳನ್ನು ಈತ ರವಾನಿಸುತ್ತಿದ್ದ. ಭಾರತೀಯ ಸೇನೆಯ ಯೂನಿಫಾರ್ಮ್ ಹಾಕಿಕೊಂಡು ತಾನೂ ಕಮಾಂಡೊ ಅಂತ ಗುರುತಿಸಿಕೊಂಡು ಕೃತ್ಯ ಎಸಗಿದ್ದಾನೆ. ಈತ ಬಾರ್ಮೆರ್ ಮಿಲಿಟರಿ ಸ್ಟೆಶನ್ ಹಾಗೂ ಮಿಲಿಟರಿ ವಾಹನಗಳ ಓಡಾಟದ ಬಗ್ಗೆ ಮಾಹಿತಿ ನೀಡಿದ್ದ.

ಮಿಲಿಟರಿ ಇಂಟೆಲಿಜೆನ್ಸ್ ಮಾಹಿತಿ ಮೇಲೆ ಬೆಂಗಳೂರು‌ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿ ಜಿತೆಂದರ್ ಸಿಂಗ್ ದೇಶದ ಆಯಕಟ್ಟಿನ ಸ್ಥಳಗಳು, ಕಟ್ಟಡ, ರಕ್ಷಣಾ ಸಂಸ್ಥೆಯ ಫೋಟೋ ತೆಗೆಯುತ್ತಿದ್ದ. ಈತ ರಾಜಸ್ಥಾನ ಮೂಲದ ವ್ಯಕ್ತಿ. ತಾನು ತೆಗೆದ ಫೋಟೋಗಳನ್ನು ವಿದೇಶಿ ಏಜೆನ್ಸಿಗಳಿಗೆ ಕಳುಹಿಸಿದ್ದ ಎನ್ನಲಾಗಿದೆ.

ಇದರ ಜೊತೆಗೆ ಆತ ತನ್ನ ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳೊಂದಿಗೆ(ಐಎಸ್‌ಐ) ಸಂಪರ್ಕ ಹೊಂದಿದ್ದನು. ವಾಟ್ಸ್ ಆಪ್ ವಿಡಿಯೋ ಕರೆ ಮಾಡುವ ಮೂಲಕ ದೇಶದ ಆಯಕಟ್ಟಿನ ಸ್ಥಳಗಳು, ಕಟ್ಟಡ, ರಕ್ಷಣಾ ಸಂಸ್ಥೆಯ ಫೋಟೋಗಳನ್ನು ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಫಿಶಿಯಲ್ ಸೀಕ್ರೆಟ್‌ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

RELATED TOPICS:
English summary :Bangalore

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...