Fri,May10,2024
ಕನ್ನಡ / English

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

20 Sep 2021
2805

ಬೆಂಗಳೂರು : ದೆಹಲಿ ಗಡಿ ಭಾಗಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು, ಎಂದು ವಿಧಾನಸೌಧದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇರ ಆರೋಪ ಮಾಡಿದ್ದಾರೆ.

ಇದಕ್ಕೂ ಮೊದಲು, ರಾಜ್ಯ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ಆಯೋಜಿಸಿತ್ತು. ಈ ಜಾಥಾದಲ್ಲಿ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈಶ್ವರ ಖಂಡ್ರೆ ಹಾಗೂ ದಿನೇಶ್ ಗುಂಡುರಾವ್ ಇನ್ನಿತರರು ಭಾಗವಹಿಸಿದ್ದರು.

ಬಳಿಕ ಸುದ್ದಿಸಂಸ್ಥೆ ಎಏನ್ಐ ನೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರ ಪ್ರಾಯೋಜಕತೆಯಿಂದ ದೆಹಲಿ ಗಡಿ ಭಾಗಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ, ಎಂದು ನೇರ ಆರೋಪ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡುರಾವ್ ಅವರು, ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಏಕೆಂದರೆ ಇದು ರೈತರ ಪ್ರತಿಭಟನೆಗೆ ಮಾಡಿದ ಅವಮಾನ. ಅವರ ಬಳಿ ಯಾವುದೇ ಪುರಾವೆ ಇದ್ದರೆ, ಅದನ್ನು(ಪ್ರತಿಭಟನೆ) ಪ್ರಾಯೋಜಿಸುತ್ತಿರುವವರನ್ನು ಅವರು ಬಂಧಿಸಬೇಕು. ನಾವು ಅವರಿಗೆ ಹಣದುಬ್ಬರ, ಎಲ್‌ಪಿಜಿ ಬೆಲೆ, ಇಂಧನ ಬೆಲೆಯ ಬಗ್ಗೆ ಕೇಳಿದೆವು. ಆದರೆ ಕೇಳದಿದ್ದಕ್ಕೆ ಅವರು ಉತ್ತರಿಸಿದರು. ಸಿಎಂಗೆ ಸುಳಿವಿಲ್ಲ, ಎಂದು ದಿನೇಶ್ ಗುಂಡುರಾವ್ ಹೇಳಿದ್ದಾರೆ.

RELATED TOPICS:
English summary :Congress or foreign agents in the country who are the sponsors of the protests by the farmers - CM Bommai

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...