ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂಸ್
ನವದೆಹಲಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,115 ನೂತನ ಕೋವಿಡ್ ಪ್ರಕರಣ ಪ್ತೆಯಾಗಿದ್ದು, 252 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಒಟ್ಟು ಕೇಸುಗಳ ಸಂಖ್ಯೆ 3 ಕೋಟಿಯ 35 ಲಕ್ಷದ 04 ಸಾವಿರದ 534ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 45 ಸಾವಿರದ 385ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷದ 09 ಸಾವಿರದ 575ಕ್ಕೆ ತಲುಪಿದ್ದು, ಈ ನಡುವೆ ಕಳೆದ 24 ಗಂಟೆಗಳಲ್ಲಿ 34 ಸಾವಿರದ 469 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 27 ಲಕ್ಷದ 49 ಸಾವಿರದ 574ಕ್ಕೆ ತಲುಪಿದೆ.
English summary :Coronavirus cases in India