Fri,Apr26,2024
ಕನ್ನಡ / English

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂಸ್

21 Sep 2021
1585

ಇಂದೋರ್ : ಗಣೇಶ ದೇವರ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಪ್ರಮಾಣದ ಅಸಡ್ಡೆ, ಅಗೌರವ ತೋರಿದ ನಗರ ಪಾಲಿಕೆ ನೌಕರರಿಗೆ ತಕ್ಕ ಶಿಕ್ಷೆ ಎದುರಾಗಿದೆ. ಗಣೇಶ ದೇವರ ಮೂರ್ತಿ ವಿಸರ್ಜನೆಯ ಕಾರ್ಯಕ್ರಮದ ಹೊಣೆಹೊತ್ತ ಇಂದೋರ್ ನಗರ ಪಾಲಿಕೆ(ಐಎಂಸಿ) ನೌಕರರು ಕರ್ತವ್ಯಲೋಪ ಅಷ್ಟೇ ಅಲ್ಲದೇ, ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನೂ ಘಾಸಿ ಗೊಳಿಸಿದ್ದರು. ಸಧ್ಯಕ್ಕೆ, ಕೆಲಸ ಕಳೆದು ಕೊಂಡಿದ್ದು ಅಲ್ಲದೇ, ಅವರ ಮೇಲೆ ಪೋಲಿಸ್ ದೂರು ಸಲ್ಲಿಲಾಗಿದೆ.

ಗಣೇಶ ವಿಗ್ರಹಗಳನ್ನು ಡಂಪರ್‌ಗಳಿಂದ ಜಲಾಶಯಕ್ಕೆ ಎಸೆಯುವುದನ್ನು ನೋಡಿದರು ವಿಡಿಯೋವೊಂದು ವೈರಲ್ ಆದ ನಂತರ 9 ನೌಕರರ ಸೇವೆಯನ್ನು ಕೊನೆಗೊಳಿಸಲಾಯಿತು, 2 ಜನರನ್ನು ಅಮಾನತುಗೊಳಿಸಲಾಗಿದೆ, ಎಂದು ಇಂದೋರ್ ನಗರ ಪಾಲಿಕೆ(ಐಎಂಸಿ) ಆಯುಕ್ತರಾದ ಪ್ರತಿಭಾ ಪಾಲ್, ಮಾದ್ಯಮಗಳಿಗೆ ತಿಳಿಸಿದ್ದಾರೆ.

ವೈರಲ್ ವೀಡಿಯೋವನ್ನು ಗಮನಿಸಿದ ನಗರಾಡಳಿತ ಸಚಿವ ಭೂಪೇಂದ್ರ ಸಿಂಗ್ ಅವರು ಜನರ ಭಾವನೆಗಳನ್ನು ನೋಯಿಸುವ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಲ್ ಅವರಿಗೆ ಸೂಚಿಸಿದ್ದರು, ಎನ್ನಲಾಗಿದೆ.

ಐಎಂಸಿ ಎಲ್ಲಾ ವಲಯ ಕಚೇರಿಗಳಲ್ಲಿ ಮೂರ್ತಿ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿತ್ತು. ಜನರು ತಮ್ಮ ಮನೆಗಳಲ್ಲಿ ಸ್ಥಾಪಿಸಿದ ವಿಗ್ರಹಗಳನ್ನು ಐಎಂಸಿ ಉದ್ಯೋಗಿಗಳಿಗೆ ಸಂಗ್ರಹ ಕೇಂದ್ರಗಳಲ್ಲಿ ಹಸ್ತಾಂತರಿಸಿದ್ದರು. ಈ ರೀತಿ ಸಂಗ್ರಹಿಸಲಾದ ಮೂರ್ತಿಗಳನ್ನು ಗೌರವಯುತವಾಗಿ ಮುಳುಗಿಸಲು ಅವರಿಗೆ ನಿರ್ದೇಶಿಸಲಾಗಿತ್ತು,

ಆದರೆ ಅವರು ಸೂಚನೆಗಳನ್ನು ಎಚ್ಚರಿಕೆಯಿಂದ ಅನುಸರಿಸಲಿಲ್ಲ. ಅವರು ಜನರ ಭಾವನೆಗಳನ್ನು ಮತ್ತು ನಂಬಿಕೆಯನ್ನು ಘಾಸಿಗೊಳಿಸಿದ್ದಾರೆ. ನಾವು ಅವರ ವಿರುದ್ಧ ಎಫ್ಐಆರ್ ದಾಖಲಿಸುತ್ತೇವೆ, ಎಂದು ಆಯುಕ್ತರು ತಿಳಿಸಿದ್ದಾರೆ.

ಹಿಂದೂ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿದ ಮತ್ತು ಐಎಂಸಿ ಘನತೆಗೆ ಧಕ್ಕೆ ತಂದಿದ್ದಕ್ಕಾಗಿ ಪೊಲೀಸರಿಗೆ ದೂರು ನೀಡಲಾಗಿದೆ.

RELATED TOPICS:
English summary :Disrespect in Ganesh idol immersion : 9 employees dismissed, 2 suspended, FIR filed

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...