ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂಸ್
ಬೆಂಗಳೂರು : ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟಿಸಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಬೆಂಗಳೂರಿನ ಅಪಾರ್ಟ್ಮೆಂಟ್ನ ಫ್ಲ್ಯಾಟ್ ಒಂದರಲ್ಲಿ ಅವಘಡ ಸಂಭವಿಸಿದೆ.
ಬೆಂಗಳೂರಿನ ದೇವರಚಿಕ್ಕನಹಳ್ಳಿಯ ಆಶ್ರೀತ ಅಪಾರ್ಟ್ಮೆಂಟ್ನಲ್ಲಿ ಈ ಅಗ್ನಿಆಕಸ್ಮಿಕ ಸಂಭವಿಸಿದೆ. ಮೂರನೇ ಮಹಡಿಯ ಫ್ಲ್ಯಾಟ್ವೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದ್ದು, ಧಗ್ಗನೆ ಹೊತ್ತಿಕೊಂಡ ಬೆಂಕಿ ಪಕ್ಕದ ಫ್ಲ್ಯಾಟ್ಗೂ ಆವರಿಸಿದೆ.
ಮಹಿಳೆಯೊಬ್ಬರು ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದಾರೆ. ಯುಟಿಲಿಟಿಯಲ್ಲಿ ಈ ಮಹಿಳೆ ಇದ್ದು, ಸುತ್ತ ಗ್ರಿಲ್ ಇದ್ದಿದ್ದರಿಂದ ಬಚಾವಾಗಲು ಸಾಧ್ಯವಿರಲಿಲ್ಲ ಎನ್ನಲಾಗಿದೆ. ಇನ್ನು ಈ ಬೆಂಕಿಯಲ್ಲಿ ಹಲವರು ಸಿಲುಕಿರುವುದಾಗಿ ಶಂಕಿಸಲಾಗ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.