Fri,Apr19,2024
ಕನ್ನಡ / English

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂಸ್

21 Sep 2021
2418

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳು ಮತಾಂತರ ಮಾಡುತ್ತಿವೆ ಎಂಬ ಆರೋಪದ ಕುರಿತು ಬಂದ ಚರ್ಚೆಗೆ ಸಂಬಂಧಿಸಿದಂತೆ ಶೂನ್ಯವೇಳೆಯಲ್ಲಿ ಗೂಳಿಹಟ್ಟಿ ಈ ವಿಷಯವನ್ನು ಪ್ರಸ್ತಾಪಿಸಿದರು.

ಹೊಸದುರ್ಗ ಕ್ಷೇತ್ರದಲ್ಲಿ 18-20 ಸಾವಿರ ಜನರನ್ನು ಮತಾಂತರ ಮಾಡಲಾಗಿದೆ.‌ ನನ್ನ ಅಮ್ಮನನ್ನು ಬಿಟ್ಟಿಲ್ಲ. ಕ್ರೈಸ್ತ ಮಿಷನರಿಗಳು ಅವರನ್ನೂ ಬ್ರೇನ್‌ ವಾಷ್‌ ಮಾಡಿ ಕಳುಹಿಸಿವೆ. ನಾನು ಈ ವಿಷಯವನ್ನು ಮನೆಯಲ್ಲಿ ಮಾತನಾಡುವಂತೆಯೂ ಇಲ್ಲ. ಮಾತನಾಡಿದರೆ ಸತ್ತು ಹೋಗುತ್ತೇನೆ ಎನ್ನುತ್ತಾರೆ. ಮತಾಂತರ ವಿರೋಧ ಮಾಡಿದರೆ ಚರ್ಚ್‌ನವರು ರೇಪ್ ಕೇಸ್ ಹಾಕಿಸ್ತಾರೆ ಎಂದು ಅವರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕ್ರಿಶ್ಚಿಯನ್ ಮಿಷನರಿಗಳಿಂದ ಬಂದವರು ಚರ್ಚ್​​ಗಳಿಗೆ ಕರೆದೊಯ್ಯುತ್ತಾರೆ. ನಂತರ ಬ್ರೈನ್ ವಾಷ್ ಮಾಡಿ ಕಳಿಸುತ್ತಾರೆ. ಮನೆಗೆ ಹೋದ ಮೇಲೆ ಹಣೆಗೆ ಕುಂಕುಮ ಇಡಬಾರದು ಎಂದೆಲ್ಲ ಹೇಳಿ ಕಳುಹಿಸುತ್ತಾರೆ. ಇದೀಗ ನನ್ನ ಅಮ್ಮನ ಮೊಬೈಲ್ ರಿಂಗ್ ಟೋನ್ ಕೂಡ ಬದಲಾಗಿದೆ, ಕ್ರಿಶ್ಚಿಯನ್ ಹಾಡುಗಳನ್ನ ಹಾಕಿಕೊಂಡಿದ್ದಾರೆ. ಕ್ರಿಶ್ಚಿಯನ್ ದೇವರ ಫೋಟೋ ಇಟ್ಟುಕೊಂಡಿದ್ದಾರೆ.

ನಮಗೆ ಇದರಿಂದ ಮುಜುಗರ ಆಗಿದೆ. ಇದು ಕೇವಲ ನಮ್ಮ ಮನೆಯ ಸಮಸ್ಯೆ ಮಾತ್ರವಲ್ಲ ರಾಜ್ಯಾದ್ಯಂತ ಈ ರೀತಿ ಆಗ್ತಿದೆ. ಎಸ್ಸಿ, ಎಸ್ಟಿ ಜನಾಂಗದವರು ನಮ್ಮ ಕ್ಷೇತ್ರದಲ್ಲಿ ಬಹಳ ಸಂಖ್ಯೆಯಲ್ಲಿ ಮತಾಂತರ ಆಗುತ್ತಿದ್ದಾರೆ. ಇವರು ಕೇವಲ ಹಿಂದೂ ಮಾತ್ರವಲ್ಲ, ಮುಸ್ಲಿಮರನ್ನೂ ಮತಾಂತರ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಏನಾದರೂ ಹೇಳಿದ್ರೆ ಅಟ್ರಾಸಿಟಿ ಕೇಸ್ , ರೇಪ್ ಕೇಸ್ ಹಾಕಿಸ್ತಾರೆ. ಕ್ರಿಶ್ಚಿಯನ್​ಗೆ ಹೋದ್ಮೇಲೆ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸಿಗುವ ಬೆನಿಫಿಟ್ ಬಿಟ್ಟು ಹೋಗಲಿ ಎಂದು ಗುಡುಗಿದರು.

ಆಗ ಮಾತನಾಡಿದ ಶಾಸಕ ಕೆಜಿ ಬೋಪಯ್ಯ, ಮತಾಂತರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಬರಬೇಕಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದರು. ಇದೇ ಮಾತನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪುಷ್ಟೀಕರಿಸಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಇದು ಸರ್ಕಾರದ ಗಮನದಲ್ಲೂ ಇದೆ. ಆಮಿಷ ಒಡ್ಡಿ ಮತಾಂತರ ಮಾಡುವುದು ಅಪರಾಧವಾಗಿದೆ. ಇದರ ಹಿಂದೆ ವ್ಯವಸ್ಥಿತ ಜಾಲ ಇದೆ. ಈ ಸಂಬಂಧ ಕಾನೂನು ತರುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

RELATED TOPICS:
English summary :Chitradurga

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...