ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ, ಲಾಡ್ಜ್ನಲ್ಲಿ ಸುರಂಗ! | ಜನತಾ ನ್ಯೂಸ್
ತುಮಕೂರು : ನಗರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ವೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಐವರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ವಸತಿ ಗೃಹದಲ್ಲಿ ಸುರಂಗ ಕೊರೆದು ಮಹಿಳೆಯರನ್ನು ಬಚ್ಚಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ದಾಳಿ ಮಾಡಲು ಆಗಮಿಸಿದ ವೇಳೆ ಸೂಚನೆ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಈ ಸೂಚನೆ ಬರುತ್ತಿದ್ದಂತೆ ಮಹಿಳೆಯರು ಹಾಗೂ ಪುರುಷರನ್ನು ಗುಹೆಯಲ್ಲಿ ಬಚ್ಚಿಡಲಾಗುತಿತ್ತು.
ನಗರದ ರಿಂಗ್ ರಸ್ತೆಯ ಬಳಿಯ ಲಾಡ್ಜ್ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ ರೂಂ ಒಂದರಲ್ಲಿ ಸುರಂಗ ಪತ್ತೆ ಹಚ್ಚಿದ ಪೊಲೀಸರು ಸುರಂಗದಲ್ಲಿ ಅವಿತಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಒಬ್ಬ ಮಹಿಳೆ ತಪ್ಪಿಸಿಕೊಂಡು ಪರಾರಿಯಾಗಿದ್ದಾಳೆ.
ರಾಷ್ಟ್ರೀಯ ಹೆದ್ದಾರಿ 4ರ ಕ್ಯಾತ್ಸಂದ್ರ ಸೇತುವೆ ಸಮೀಪ ಕಳೆದ ಕೆಲ ದಿನಗಳ ಹಿಂದೆ ಕಾಂಡೋಮ್ಗಳ ರಾಶಿ ಚೆಲ್ಲಾಡಿದ್ದು ಪತ್ತೆಯಾಗಿತ್ತು. ಈ ಮಾಹಿತಿಯ ಜಾಡು ಹಿಡಿದು ವಿವರ ಸಂಗ್ರಹಿಸಿದಾಗ ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಗೊತ್ತಾಗಿದೆ.