ಎರಡು ಕೋಟಿ ಹಣಕ್ಕಾಗಿ ಸಾಫ್ಟ್‌ವೇರ್ ಇಂಜಿನಿಯರ್‌ ಅಪಹರಣ, ಅಪಹರಣಕಾರರ ಬಂಧನ! | ಜನತಾ ನ್ಯೂಸ್

23 Sep 2021
630

ಬೆಂಗಳೂರು : ಎರಡು ಕೋಟಿ ಹಣಕ್ಕಾಗಿ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಅಪಹರಿಸಿದ್ದ ಅಪಹರಣಕಾರರನ್ನು ಬಂಧಿಸಿ, ಕಿಡ್ನ್ಯಾಪ್ ಆಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಕಿಡ್ನ್ಯಾಪ್ ಆಗಿದ್ದ ಟೆಕ್ಕಿ ವಿನೀತ್ ವರ್ಧನ್ ಎಂಬುವವರನ್ನು ರಕ್ಷಣೆ ಮಾಡಲಾಗಿದೆ. ಸಿನಿಮೀಯ ಶೈಲಿಯಲ್ಲಿ ಕೋರಮಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ವಿನೀತ್ ವರ್ಧನ್​ನ ಕಿಡ್ನ್ಯಾಪ್ ಆಗಿತ್ತು. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಇತ್ತೀಚೆಗೆ ತನ್ನದೇ ಸ್ವಂತ ಕಂಪನಿಯನ್ನು ಹುಟ್ಟು ಹಾಕಿದ್ದ. ಕೆಲಸದ ಸಂಬಂಧ ಪ್ರತಿಷ್ಠಿತ ಕಂಪನಿ ಜತೆ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದ್ದ. ಸೆ. 25 ರಂದು ವಿನೀತ್ ವರ್ಧನ್ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂಪಾಯಿ ಹಣ ಬಂದು ಬೀಳುವುದು ಬಾಕಿ ಇತ್ತು.

ಎಣ್ಣೆ ಮಾರ್ಟಿ ಮಾಡುವ ನೆಪದದಲ್ಲಿ ಕೋರಮಂಗಲದಲ್ಲಿರುವ ವಿನೀತ್ ವರ್ಧನ್ ಮನೆಗೆ ಸ್ನೇಹಿತ ಪ್ರಶಾಂತ್ ಮತ್ತು ಸಂತೋಷ್ ಆಗಮಿಸಿದ್ದರು. ಪಾರ್ಟಿ ಮಾಡುವ ನೆಪ ಇಟ್ಟುಕೊಂಡು ಕಾರಿನಲ್ಲಿ ಬಂದಿದ್ದ ಸ್ನೇಹಿತರಿಬ್ಬರು ವಿನೀತ್ ವರ್ಧನ್ ಮನೆಗೆ ಭೇಟಿ ನೀಡಿದ್ದರು. ಮೊದಲಿನಿಂದಲೂ ಸ್ನೇಹಿತರ ಜತೆ ಸೇರಿ ಪಾರ್ಟಿ ಮಾಡುತ್ತಿದ್ದ ವಿನೀತ್ ವರ್ಧನ್‌ಗೆ ಯಾವುದೇ ಅನುಮಾನ ಬಂದಿರಲಿಲ್ಲ.

ಸ್ನೇಹಿತರ ಜತೆ ಪಾರ್ಟಿಗೆ ಎಂದು ಹೋದ ವಿನೀತ್ ಎರಡು ದಿನವಾದರೂ ಮನೆಗೆ ಬಂದಿರಲಿಲ್ಲ. ಅನುಮಾನಗೊಂಡ ಮನೆಯವರು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎರಡು ದಿನಕ್ಕೆ ಒಂದೊಂದು ಕಾಲ್ ಮಾಡಿ ಹಣ ನೀಡುವಂತೆ ಹೇಳಿದ್ದರು. ದೂರು ದಾಖಲಾಗಿರುವ ವಿಚಾರ ಆರೋಪಿಗಳಿಗೆ ತಿಳಿಯುತ್ತಿದ್ದಂತೆ ವಿನೀತ್​ನ ಕೊಲೆ ಮಾಡಿ, ನಾವು ಸಾಯುತ್ತೇವೆ ಅಂದಿದ್ದರು. ಎರಡು ದಿನದಲ್ಲಿ ಹಣ ಕೊಡಲಿಲ್ಲ ಅಂದರೆ ನಾವು ಸಾಯುತ್ತೀವಿ, ಅವನನ್ನು ಸಾಯಿಸುತ್ತೇವೆ ಅಂತ ಹೇಳಿದ್ದರು.

ಕಿಡ್ನ್ಯಾಪರ್ಸ್ 50 ಕಿಲೋಮೀಟರ್ ಕ್ರಮಿಸಿ ಫೋನ್ ಕರೆ ಮಾಡಿದ್ದರು. ಫೋನ್ ಕರೆ ಮಾಡಿದ ಬಳಿಕ ಸ್ವಿಚ್ ಆಫ್ ಮಾಡುತ್ತಿದ್ದರು. ಫಾಸ್ಟ್​ಟ್ಯಾಗ್​ ಮೂಲಕ ಕಿಡ್ನ್ಯಾಪರ್ಸ್ ಸುಳಿವು ಪತ್ತೆಯಾಗಿತ್ತು. ಟೆಕ್ಕಿ ವಿನೀತ್‌ನನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೋರಮಂಗಲ ಪೊಲೀಸರು ಕಾರ್ಯಚರಣೆ ನಡೆಸಿ ಎಡ್ವಿನ್ ಪ್ರಶಾಂತ್, ಸಂತೋಷ್, ಅರಿವೇಗಲನ್ ಬಂಧಿಸಿದ್ದಾರೆ.

RELATED TOPICS:
English summary :Bangalore

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...