Mon,May20,2024
ಕನ್ನಡ / English

ಅತ್ಯುತ್ತಮ ಶಾಸಕ ಪ್ರಶಸ್ತಿ: ಮಾಜಿ ಸಿಎಂ ಬಿಎಸ್​ವೈಗೆ ಪ್ರದಾನ | ಜನತಾ ನ್ಯೂಸ್

24 Sep 2021
2826

ಬೆಂಗಳೂರು : ಲೋಕಸಭೆ ಮಾದರಿಯಂತೆ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಸ್ಪೀಕರ್​ ವಿಶ್ವೇಶರ ಹೆಗಡೆ ಕಾಗೇರಿಯವರು ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಅತ್ಯುತ್ತಮ ಶಾಸಕರಾಗಿ ಆಯ್ಕೆ ಮಾಡಿದರು. ಲೋಕಸಭಾ ಸ್ಪೀಕರು ಬಿಎಸ್​ವೈಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಬಗ್ಗೆ ಮಾತನಾಡಿದ ಸ್ಪೀಕರ್​ ಕಾಗೇರಿ ಅವರು ಈ ವರ್ಷದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡ್ತಿದ್ದೇವೆ. ಲೋಕಸಭೆಯ ಮಾದರಿಯಲ್ಲಿ ಅತ್ಯುತ್ತಮ ಮಾದರಿ ಶಾಸಕ ಪ್ರಶಸ್ತಿ ಕೊಡಿ ಎಂದು ಓಂ ಬಿರ್ಲಾ ಅವರು ಹೇಳಿದರು. ಅದರಂತೆ ಈ ವರ್ಷದಿಂದ ಪ್ರಶಸ್ತಿ ನೀಡುತ್ತಿದ್ದೇವೆ. ಇದು ಶಾಸಕರ ಜವಾಬ್ದಾರಿ ಹೆಚ್ಚಿಸುವ ಕೆಲಸವಾಗಿದೆ ಎಂದರು.

ಈ ಕುರಿತಂತೆ ಬಿಎಸ್​ವೈ ಟ್ವೀಟ್​ ಮಾಡಿದ್ದು, ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ.ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ವಿಧಾನಸಭೆ ಜಂಟಿ ಸದನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಪರಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಬಸವರಾಜ ಎಸ್ ಬೊಮ್ಮಾಯಿ ಭಾಗಿಯಾಗಿದ್ದರು.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...