ಮಗುವನ್ನು ಎತ್ತಿ ಮುದ್ದಾಡಿದ ನಿಖಿಲ್, ಮರಿ ಮೊಮ್ಮಗನನ್ನು ಕಂಡು ಸಂತಸದಲ್ಲಿ ದೇವೇಗೌಡರು! | ಜನತಾ ನ್ಯೂಸ್
ಬೆಂಗಳೂರು : ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಮಗುವಿಗೆ ಜನ್ಮ ನೀಡಿದ್ದು, ಈ ಖುಷಿಯನ್ನು ನಿಖಿಲ್ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಪ್ರಸ್ತುತ ನಿಖಿಲ್ ಕುಮಾರಸ್ವಾಮಿ ಮಗುವನ್ನು ಎತ್ತಿಕೊಂಡು ಮುದ್ದಾಡುತ್ತಿರುವ ದೃಶ್ಯ ವೈರಲ್ ಆಗಿದ್ದು, "ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಲವ್ ಯು ಮೈ ಸನ್" ಎಂದು ಬರೆದುಕೊಂಡಿದ್ದಾರೆ.
ಪತ್ಮಿ ಸಮೇತರಾಗಿ ಆಸ್ಪತ್ರೆಗೆ ಭೇಟಿ ಕೊಟ್ಟ ಮಾಜಿ ಪ್ರಧಾನಿ ದೇವೇಗೌಡರು ಮರಿ ಮೊಮ್ಮಗನನ್ನು ಎತ್ತಿಕೊಂಡು ಖುಷಿ ಪಟ್ಟಿದ್ದಾರೆ.
ಇನ್ನು ನಿಖಿಲ್ ಅವರಿಗೆ ಗಂಡು ಮಗುವಾದ ವಿಷಯವನ್ನು ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದರು. ಅಲ್ಲದೆ ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.