ವಿಶ್ವಸಂಸ್ಥೆಯಲ್ಲಿ ಪಿಓಕೆ ಹಿಂತಿರುಗಿಸುವಂತೆ ಹೇಳಿ, ಪಾಕ್, ಅದರ ಪ್ರಧಾನಿ ಇಮ್ರಾನ್ ಖಾನ್ ಮುಖಭಂಗ ಮಾಡಿದ ಭಾರತ | ಜನತಾ ನ್ಯೂಸ್

26 Sep 2021
499

ನ್ಯೂಯಾರ್ಕ್ : ವಿಶ್ವಸಂಸ್ಥೆಯಲ್ಲಿ ಭಾರತವು, ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ಮತ್ತೊಮ್ಮೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಮ್ಮೆ ಸುಳ್ಳು ಮಾತನಾಡುವ ಮೂಲಕ ವಿಶ್ವಸಂಸ್ಥೆಯ ಮಹಾನ್​ ವೇದಿಕೆಯ ಘನತೆಗೆ ಧಕ್ಕೆ ತಂದಿದ್ದಾರೆ. ಎಂದು ಹೇಳಿದ್ದಾರೆ ಅಲ್ಲದೇ, ಪಾಕಿಸ್ತಾನ ಅಕ್ರಮವಾಗಿ ವಶ ಪಡಿಸಿಕೊಂಡಿರುವ ಕಾಶ್ಮೀರದ ಭಾಗವನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತಾಕಿತು ಮಾಡಿ ಪಾಕಿಸ್ತಾನಕ್ಕೆ ಹಾಗೂ ಅದರ ಪ್ರಧಾನಿ ಇಮ್ರಾನ್ ಖಾನ್ ಗೆ ಭಾರಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮುಖಭಂಗ ಮಾಡಿದೆ.

ಪಾಕಿಸ್ತಾನ ಉಗ್ರರರ ಪೋಷಕ ಎಂಬುದನ್ನೂ ಭಾರತ ಒತ್ತಿ ಹೇಳಿದೆ. ಪಾಕಿಸ್ತಾನ ತನ್ನ ನೆಲದಲ್ಲಿ ಭಯೋತ್ಪಾದನೆಯನ್ನು ಬೆಳೆಸುತ್ತಿದೆ ಎಂಬುದು ಜಗತ್ತಿಗೇ ಗೊತ್ತಿರುವ ವಿಚಾರ. ಪಾಕ್​ನ ಈ ನೀತಿಯಿಂದಾಗಿ ನಮ್ಮ ನೆಲವಷ್ಟೇ ಅಲ್ಲ, ಇಡೀ ಜಗತ್ತು ಸಂಕಷ್ಟಕ್ಕೀಡಾಗಿದೆ. ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿದ್ದನು. ಇನ್ನು ಪಾಕಿಸ್ತಾನದ ಒಳಗೆ ನಡೆಯುತ್ತಿರುವ ಮತಾಂಧತೆಯ ಹಿಂಸಾಚಾರವನ್ನೂ ಕೂಡ ಅವರು ಉಗ್ರರ ಕೃತ್ಯ ಎಂದೇ ಬಿಂಬಿಸಿಕೊಳ್ಳುತ್ತಿದ್ದಾರೆ, ಎಂದು ಸಭೆಗೆ ತಿಳಿಸಿದೆ.

ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಭಾರತದ ಪ್ರತಿನಿಧಿ ಸ್ನೇಹಾ ದುಬೆ ಅವರು, ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ಮತ್ತೊಮ್ಮೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನನ್ನ ದೇಶ ಭಾರತದ ಆಂತರಿಕ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ವಿಶ್ವಸಂಸ್ಥೆಯ ಮಹಾನ್​ ವೇದಿಕೆಯ ಘನತೆಗೆ ಧಕ್ಕೆ ತಂದಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಮತ್ತೊಮ್ಮೆ ಸುಳ್ಳು ಹೇಳಿದ್ದಾರೆ ಎಂದು ಹೇಳಿದರು. ಅಷ್ಟೇ ಅಲ್ಲ, ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಮತ್ತು ಲಡಾಖ್​ಗಳು ಯಾವಾಗಲೂ ನಮ್ಮ ಭಾರತದ ಅವಿಭಾಜ್ಯ ಪ್ರದೇಶಗಳು. ಅದನ್ನು ಭಾರತದಿಂದ ಬೇರ್ಪಡಿಸಲು ಯಾರಿಗೂ, ಯಾವಾಗಲೂ ಸಾಧ್ಯವಿಲ್ಲ. ಪಾಕಿಸ್ತಾನ ಕಾನೂನು ಬಾಹಿರವಾಗಿ ವಶಪಡಿಸಿಕೊಂಡಿರುವ ಕಾಶ್ಮೀರದ ಭಾಗಗಳೂ ಕೂಡ ಭಾರತದ್ದೇ ಆಗಿದೆ. ಹೀಗೆ ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶಗಳಿಂದ ಕೂಡಲೇ ಪಾಕಿಸ್ತಾನ ಜಾಗ ಖಾಲಿ ಮಾಡಬೇಕು ಎಂದು ಆಗ್ರಹಿಸುತ್ತೇನೆ, ಎಂದು ಕಟುವಾಗಿ ಹೇಳಿದ್ದಾರೆ.

ಭಾರತ ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪಾಕಿಸ್ತಾನ ಪ್ರಧಾನಿ ಸಂಕಟ ಹೆಚ್ಚಾಗಿದೆ. ಅವಕಾಶ ಸಿಕ್ಕಾಗಲೆಲ್ಲ ಈ ಬಗ್ಗೆ ಮಾತನಾಡುತ್ತಾರೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಾಶ್ಮೀರದ ಬಗ್ಗೆ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಹಿಂದೆ ಕೂಡ ಮಾತನಾಡಿದ್ದರು. ಆದರೆ ವಿಶ್ವ ಸಂಸ್ಥೆ ಸದಸ್ಯ ರಾಷ್ಟ್ರಗಳು ಈ ವಿಚಾರದಲ್ಲಿ ನಾವು ತಲೆ ಹಾಕೋದಿಲ್ಲ, ಇದು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯ ಎಂದು ಹೇಳಿದ್ದವು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಿನ್ನೆ ಮಾತನಾಡಿದ್ದ ಪಾಕ್​ ಪ್ರಧಾನಿ ಇಮ್ರಾನ್ ಖಾನ್​, ಜಮ್ಮು-ಕಾಶ್ಮೀರವನ್ನು ಪ್ರಸ್ತಾಪಿಸಿದ್ದರು. 2019ರ ಆಗಸ್ಟ್​ 5ರಂದು ಭಾರತ ಸರ್ಕಾರ ಅಲ್ಲಿನ ವಿಶೇಷ ಸ್ಥಾನಮಾನ ತೆಗೆದು, ಜಮ್ಮು-ಕಾಶ್ಮೀರ ಮತ್ತು ಲಡಾಖ್​​ನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ರೂಪಿಸಿದ್ದರ ಬಗ್ಗೆ ಮಾತನಾಡಿದ್ದರು. ಅಷ್ಟೇ ಅಲ್ಲ, ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಗೀಲಾನಿಯವರ ಸಾವಿನ ಬಗ್ಗೆಯೂ ಪ್ರಸ್ತಾಪ ಮಾಡಿದ್ದರು.

RELATED TOPICS:
English summary :India faced off Pak & PM Imran Khan - says to return PoK

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...