ಚುನಾವಣೆಗೆ 18 ತಿಂಗಳು ಬಾಕಿ, ಅದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷ ಸಂಘಟನೆಗೆ ಕ್ರಮ! | ಜನತಾ ನ್ಯೂಸ್

27 Sep 2021
621

ಬೆಂಗಳೂರು : ಚುನಾವಣೆಗೆ 18 ತಿಂಗಳು ಬಾಕಿ ಇದೆ. ಅದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷ ಸಂಘಟನೆಗೆ ಕ್ರಮ ವಹಿಸಲಾಗಿದೆ. ಕನ್ನಡಿಗರ ಸ್ವಂತ ಪಕ್ಷ ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ನಾಯಕರಿಗಾಗಿ ನಾಲ್ಕು ದಿನಗಳ ಜನತಾ ಪರ್ವ 1.0 ಎಂಬ ವಿಶೇಷ ಕಾರ್ಯಾಗಾರವನ್ನು ಜಾತ್ಯಾತೀತ ಜನತಾದಳ ಪಕ್ಷ ಆರಂಭಿಸಿದೆ. ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಅವರು, ಪಕ್ಷ ಬಲವಾಗುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಪಕ್ಷದಿಂದ ಹೊರಗೆ ಕಾಲಿಟ್ಟಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ. ಹೋಗಬೇಕು ಎಂದುಕೊಂಡವರು ಹೋಗಬಹುದು ಎಂದರು.

ಪಕ್ಷ ಬಿಡಬೇಕು ಅಂದುಕೊಂಡವರಿಗೆ ಅದೊಂದು ನೆಪ ಅಷ್ಟೇ. ನಾನು ಯಾರನ್ನೂ ಕಡೆಗಣಿಸಿಲ್ಲ. ಜನ ಸಾಮಾನ್ಯರ ಕಷ್ಟವನ್ನೇ ಕೇಳುವವನು ನಾನು. ನಮ್ಮ ಶಾಸಕರ ಕಷ್ಟ ಕೇಳಲ್ವಾ..? ಪಕ್ಷ ಬಿಡಬೇಕು ಅಂದುಕೊಂಡವರು ನೀಡುವ ಸಬೂಬು ಇದು ಅಷ್ಟೇ ಎಂದು ಅವರು ಹೇಳಿದರು.

ನಾವು ಮುಂದಿನ 17 ತಿಂಗಳುಗಳ ಕಾಲ ಕಷ್ಟಪಟ್ಟು ಕೆಲಸ ಮಾಡುತ್ತೇವೆ. ವಿವಿಧ ಪಕ್ಷದ ಚಟುವಟಿಕೆಗಳಲ್ಲಿ ಎಡೆಬಿಡದೆ ತೊಡಗಿಕೊಳ್ಳುತ್ತೇವೆ. 2023 ರಲ್ಲಿ ಕರ್ನಾಟಕಕ್ಕೆ ಕನ್ನಡಿಗರಿಂದ ಸರ್ಕಾರವನ್ನು ಜೆಡಿ ಎಸ್ ಮೂಲಕ ತರುವಲ್ಲಿ ಯಶಸ್ವಿಯಾಗುವ ವಿಶ್ವಾಸವಿದೆ. ಇದು 123ಕ್ಕೂ ಹೆಚ್ಚು ಸ್ಥಾನ ಆಗಿರಬಹುದು,ಇದಕ್ಕಿಂತ ಕಡಿಮೆ ಅಲ್ಲ. ಈ ಗುರಿ ಮೇರೆಗೆ ನಾವು ನಮ್ಮ ಚಟುವಟಿಕೆಗಳನ್ನು ಆರಂಭಿಸಿದ್ದೇವೆ. 2023 ರಿಂದ ಕರ್ನಾಟಕದಲ್ಲಿ ಒಂದು ಹೊಸ ಯುಗವು ಕನ್ನಡಿಗರ ಸ್ವಂತ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಆರಂಭವಾಗುತ್ತದೆ ಎಂದು ಹೇಳಿದರು.

ಜಾತ್ಯತೀತ ಜನತಾದಳಕ್ಕೆ ಇರುವ ಅವಕಾಶಗಳನ್ನು ಉತ್ತಮವಾಗಿ ಬಳಕೆ ಮಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳ ನಡವಳಿಕೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು. ಪಕ್ಷದ ಸಂಘಟನೆಗೆ ಹೊಸ ರೀತಿಯಾಗಿ ಸಜ್ಜಾಗುತ್ತಿದ್ದೇವೆ. ಆಧುನಿಕ ಟೆಕ್ನಾಲಜಿಯನ್ನು ಬಳಸಿಕೊಳ್ಳುತ್ತಿದೆ. ಮುಂದಿನ ಚುನಾವಣೆಗೆ ಸಕಲ ರೀತಿಯ ಸಿದ್ದತೆಗಳು ಆಗಿವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಕಾರ್ಯಾಗಾರದಿಂದ ಗುರುತಿಸಲಾದ ಅಭ್ಯರ್ಥಿಗಳು ಮೊದಲ ಹಂತದಲ್ಲಿ ತಮ್ಮ ಕ್ಷೇತ್ರಗಳಲ್ಲಿ ಜನರಿಗೆ ಹೇಗೆ ಹತ್ತಿರವಾಗಬೇಕು ಎಂಬುದರ ಕುರಿತು ತರಬೇತಿ ನೀಡಲಾಗುವುದು. ಅವರಿಗೆ ಶಿಸ್ತುಬದ್ಧವಾಗಿ ನಾಯಕತ್ವ ಗುಣಗಳನ್ನು ನಿರ್ಮಿಸಲು ಎಲ್ಲ ರೀತಿಯ ತರಬೇತಿಯನ್ನು ನೀಡಲಾಗುವುದು. ಈ ಎಲ್ಲಾ ತರಬೇತಿಯ ಹೊರತಾಗಿಯೂ, ಗುರುತಿಸಲಾದ ಅಭ್ಯರ್ಥಿಯು ಪಕ್ಷದ ನಿರೀಕ್ಷೆಯಂತೆ ಕರ್ತವ್ಯಗಳನ್ನು ನಿರ್ವಹಿಸದಿದ್ದರೆ, ಅವರನ್ನು ಬದಲಾಯಿಸಲು ನಿಬಂಧನೆಗಳಿವೆ ಎಂದು ಅವರು ಹೇಳಿದರು.

RELATED TOPICS:
English summary :H D Kumaraswamy

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನ್ಯೂಸ್ MORE NEWS...