ಸಮನ್ಸ್​ ನೀಡುವ ನೆಪದಲ್ಲಿ ಯುವತಿಯ ಅತ್ಯಾಚಾರ ಮಾಡಿದ ಪೊಲೀಸ್​ ಅಧಿಕಾರಿ! | ಜನತಾ ನ್ಯೂಸ್

27 Sep 2021
663

ದಕ್ಷಿಣ ಕನ್ನಡ : ಎರಡು ವರ್ಷಗಳ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ವಿಚಾರಣೆ ಹಾಗೂ ಸಮನ್ಸ್ ನೀಡುವ ನೆಪದಲ್ಲಿ ಪೋಲೀಸ್ ಸಿಬ್ಬಂದಿಯೋರ್ವ ಅತ್ಯಾಚಾರ ನಡೆಸಿ ಗರ್ಭಪಾತ ಮಾಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕಡಬ ಪೊಲೀಸರಿಗೆ ಯುವತಿ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಪೊಲೀಸ್ ಸಿಬ್ಬಂದಿಯೊಬ್ಬ ಬಲತ್ಕಾರದಿಂದ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದಾನೆ. ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಎಲ್ಲೋ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ. ಅಲ್ಲದೆ ಗರ್ಭಪಾತ ಮಾಡಿಸಲು ಹಣವನ್ನು ಕೂಡ ಆ ಪೊಲೀಸ್‌ ಪೇದೆ ನೀಡಿದ್ದಾನೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

ದೂರಿನ ಪ್ರಕಾರ :
ನಾನು ಹಾಗೂ ನನ್ನ ಪತ್ನಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಎರಡು ವರ್ಷಗಳ ಹಿಂದೆ ನನ್ನ ಮಗಳು ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಆ ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ ಅಷ್ಟೇ.. ಈ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ಯಾವುದೋ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದ.

ಆಗ ಪರಿಚಯಸ್ಥನಾಗಿದ್ದ.ಪ್ರಕರಣ ಮುಗಿದಿದ್ದರೂ ಸಿಬ್ಬಂದಿ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು. ಆದರೆ, ನನಗೆ ಇಂತಹ ಕೆಟ್ಟ ಚಾಳಿ ಇರುವುದು ನನ್ನ ಗಮನಕ್ಕೆ ಬಂದಿರುವುದಿಲ್ಲ.

ಆದರೆ, ಇತ್ತೀಚೆಗೆ ದೈಹಿಕ ಬೆಳವಣಿಗೆಯಲ್ಲಿ ಏರುಪೇರಾಗಿ ಮಗಳು ಗರ್ಭಿಣಿ ಆಗಿರುವುದು ತಿಳಿದು ಬಂದಿದೆ. ಮಗಳನ್ನು ವಿಚಾರಿಸಿದಾಗ ಕಡಬ ಪೊಲೀಸ್ ಸಿಬ್ಬಂದಿ ನನ್ನನ್ನು ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಆದುದರಿಂದ ನನಗೆ ಐದೂವರೆ ತಿಂಗಳು ಆಗಿದೆ ಎಂದು ಆಕೆ ಬಾಯಿ ಬಿಟ್ಟಿದ್ದಳು.

ಇದೇ ವೇಳೆ ನಾನು ಸಿಬ್ಬಂದಿಯನ್ನ ಸಂಪರ್ಕ ಮಾಡಿ ನನ್ನ ಮಗಳನ್ನು ಮದುವೆಯಾಗು ಎಂದು ಹೇಳಿದ್ದೆ. ಆ ವೇಳೆ ನಾನು ಮದುವೆಯಾಗುವುದಿಲ್ಲ, ಗರ್ಭಿಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಿಸುತ್ತೇನೆ. ಅದಕ್ಕೆ ತಗಲುವ ಖರ್ಚು ಕೊಡುತ್ತೇನೆ ಎಂದು ಹೇಳಿದ್ದ.

ಇದಕ್ಕೆ ನಾನು ನೀನು ಖರ್ಚು ಕೊಡುವುದು ಬೇಡ, ಅಬಾರ್ಷನ್ ಮಾಡಿಸುವುದೂ ಬೇಡ ಎಂದು ಹೇಳಿದ್ದೆ. ಆ ಬಳಿಕ ನಾನು ತುಂಬಾ ಆಘಾತಗೊಳಗಾಗಿದ್ದೆ. ಹೀಗಿರುವಾಗ 18-9-2021ರಂದು ನನ್ನ ಹೆಂಡತಿ ಹಾಗೂ ಮಗಳು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ.

ಪತ್ನಿ ನನಗೆ ಫೋನ್ ಮಾಡುತ್ತಾಳೆ. ಆದರೆ, ಎಲ್ಲಿದ್ದೇನೆ ಎಂದು ಹೇಳುತ್ತಿಲ್ಲ, ಅಬಾರ್ಷನ್ ಮಾಡಲಾಗಿದೆ. ಅದಕ್ಕೆ 35,000/-ನ್ನು ಆತ ಆನ್​ಲೈನ್​ಲ್ಲಿ ಹಣ ಕಳಿಸಿದ್ದಾನೆ. ನಾವು ಒಂದು ಕಡೆ ಇದ್ದೇವೆ, ಎಲ್ಲಿ ಅಂತಾ ಹೇಳುವುದಿಲ್ಲ ಎಂದು ನನ್ನ ಪತ್ನಿ ಹೇಳುತ್ತಿದ್ದಾಳೆ.

ಆದುದರಿಂದ ಅತ್ಯಾಚಾರ ಎಸಗಿರುವ ಸಿಬ್ಬಂದಿಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಮತ್ತು ನನ್ನ ಮಗಳು ಹಾಗೂ ಪತ್ನಿಯನ್ನು ಆತ ಮಂಗಳೂರಿನ ಎಲ್ಲಿಯೋ ಅಜ್ಞಾತ ಸ್ಥಳದಲ್ಲಿರಿಸಿದ್ದು, ಅವರನ್ನು ಪತ್ತೆ ಹಚ್ಚಬೇಕು.

ಇದೆಲ್ಲಾ ಮಾಡಿ ಪೊಲೀಸ್ ಪ್ರಭಾವ ಬಳಸಿ ನಮ್ಮನ್ನು ಬೆದರಿಸುತ್ತಿರುವ ಆತನನ್ನು ವಿಚಾರಣೆ ನಡೆಸಿ ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಕೊಡಿಸಬೇಕು ಎಂದು ಅವರು ವಿನಂತಿಸಿದ್ದಾರೆ.

RELATED TOPICS:
English summary :Mangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...