Fri,Apr26,2024
ಕನ್ನಡ / English

ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ, ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ನಿಂದ ಮಹತ್ವದ ತೀರ್ಪು | ಜನತಾ ನ್ಯೂಸ್

29 Sep 2021
1965

ಬೆಂಗಳೂರು : ವಿಕೃತಕಾಮಿ ಉಮೇಶ್ ರೆಡ್ಡಿಗೆ ಇಂದು ಕರ್ನಾಟಕ ಹೈಕೋರ್ಟ್​ನಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಗಲ್ಲು ಶಿಕ್ಷೆ ಖಾಯಂಗೊಳಿಸಿದೆ.

ಇಂದು ಗಲ್ಲು ಶಿಕ್ಷೆಯನ್ನು ಬದಲಿಸಿ ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸೋ ಕುರಿತಂತೆ ವಿಕೃತಕಾಮಿ ಉಮೇಶ್ ರೆಡ್ಡಿ ಸಲ್ಲಿಸಿದ್ದಂತ ಅರ್ಜಿಯನ್ನು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿದರು.

10 ವರ್ಷಗಳಿಂದ ತನ್ನನ್ನು ಒಂಟಿಸೆರೆಯಲ್ಲಿಡಲಾಗಿದೆ. ಕ್ಷಮಾದಾನ ಅರ್ಜಿ ಇತ್ಯರ್ಥ ವಿಳಂಬಿಸಲಾಗಿದೆ. ಇದರಿಂದ ಮಾನಸಿಕ ಯಾತನೆ ಅನುಭವಿಸಿದ್ದಾಗಿ ಉಮೇಶ್ ರೆಡ್ಡಿ ವಕೀಲರ ಮೂಲಕ ತನ್ನ ವಾದ ಮುಂದಿಟ್ಟಿದ್ದರು.

ಆದರೆ ಕೋರ್ಟ್ ಉಮೇಶ್ ರೆಡ್ಡಿಯ ವಾದವನ್ನು ತಳ್ಳಿಹಾಕಿದ್ದು ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ವಿಳಂಬ ಮಾಡಿಲ್ಲ. ಉಮೇಶ್ ರೆಡ್ಡಿಯನ್ನು ಒಂಟಿ ಸೆರೆವಾಸದಲ್ಲಿದ್ದ ಎನ್ನಲಾಗದು ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.

ವಿಕೃತಕಾಮಿ ಉಮೇಶ್ ರೆಡ್ಡಿ ಈ ಹಿಂದೆ ಗಲ್ಲು ಶಿಕ್ಷೆಗೆ ಕ್ಷಮಾಧಾನಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ಆದರೆ, ರಾಷ್ಟ್ರಪತಿಗಳು ಅವರ ಕ್ಷಮಾಧಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಈ ಬಳಿಕ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸುವಂತೆ ಕೋರಿದ್ದರು. ಆದರೆ ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಆದರೆ ಉಮೇಶ್ ರೆಡ್ಡಿ ಕೋರಿದ್ದ ಸಮಯದ ಅವಕಾಶವನ್ನು ಕೋರ್ಟ್​ ಒಪ್ಪಿದ್ದು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲು 6 ವಾರ ಕಾಲಾವಕಾಶ ನೀಡಲಾಗಿದೆ. 6 ವಾರ ಉಮೇಶ್ ರೆಡ್ಡಿಯನ್ನು ಗಲ್ಲಿಗೇರಿಸುವಂತಿಲ್ಲ. ಗಲ್ಲು ಶಿಕ್ಷೆಯಾದ ಕಾರಣ ಈ ಕಾಲಾವಕಾಶ ನೀಡುತ್ತಿದ್ದೇವೆ ಎಂದು ನ್ಯಾ. ಅರವಿಂದ್ ಕುಮಾರ್, ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಸ್ಪಷ್ಟನೆ ನೀಡಿದ್ದಾರೆ.

RELATED TOPICS:
English summary :Umesh Reddy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...