Fri,Apr26,2024
ಕನ್ನಡ / English

ವಕೀಲನ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ, 9 ಮಂದಿ ಬಂಧನ! | ಜನತಾ ನ್ಯೂಸ್

29 Sep 2021
4349

ಬೆಂಗಳೂರು : ವಕೀಲನನ್ನು ಅಪಹರಿಸಿದ್ದ ಸ್ಯಾಂಡಲ್​​ವುಡ್ ಖಳನಟರು ಸೇರಿದಂತೆ 9 ಮಂದಿ ಅಪಹರಣಕಾರರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಸಿನಿಮಾ ಸ್ಟೈಲ್​ನಲ್ಲಿ ವಕೀಲರೊಬ್ಬರನ್ನು 10 ಲಕ್ಷಕ್ಕಾಗಿ ಅಪಹರಣ ಮಾಡಿದ್ದರಂತೆ ಸ್ಯಾಂಡಲ್​ವುಡ್​ನ ಕೆಲ ಸಹ ಕಲಾವಿದರು. ವಕೀಲ ಅಭಯ್ ರವೀಂದ್ರ ಕುಲಕರ್ಣಿ ಎಂಬುವರನ್ನು ಅಪಹರಿಸಿದ ಆರೋಪದ ಮೇರೆಗೆ ಪ್ರಮುಖ ಆರೋಪಿ ಸಿದ್ದೇಶ್, ಸಂಜಯ್, ಅರುಣ್, ಅಶೋಕ್, ರವಿ ಸೇರಿದಂತೆ 9 ಮಂದಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ‌.

ಉದ್ಯಮಿ ಜೊತೆ ಸೇರಿ ವಕೀಲರ ಮನೆಯವರಿಗೆ ಕರೆ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ವಕೀಲ‌ ಅಭಯ್ ರವೀಂದ್ರ ಕುಲಕರ್ಣಿ ಅವರು ಕಿಡ್ನಾಪ್ ಆಗಿ 12 ಗಂಟೆ ಕಳೆಯುವಷ್ಟರಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಸಂಜಯ್​ ಕನ್ನಡ ಭಜರಂಗಿ, ಕೆಜಿಎಫ್​, ಭರ್ಜರಿ ಹಾಗೂ ತೆಲುಗು ಸಿನಿಮಾದಲ್ಲಿ ಸಹ ಕಲಾವಿದನಾಗಿ ನಟಿಸಿದ್ದಾನೆ. ಇನ್ನು ಸಿದ್ದೇಶ್​ ಸಿನಿಮಾಗಳಿಗೆ ಫೈನಾನ್ಸ್ ಮಾಡುತ್ತಿದ್ದ ಕಾರಣದಿಂದ ಈ ಸಹ ಕಲಾವಿದರ ಜೊತೆ ಪರಿಚಯ ಬೆಳೆಸಿಕೊಂಡಿದ್ದರಂತೆ.

ಇವರಿಗೆ ಪರಿಚಿತನಾಗಿದ್ದ ಸಿದ್ದೇಶ್ ಹಣಕಾಸಿನ ವ್ಯವಹಾರ ಹೊಂದಿದ್ದ. ಖಾಸಗಿ ಕಂಪನಿಯೊಂದರಲ್ಲಿ ಕಾನೂನು ಸಮಾಲೋಚಕನಾಗಿದ್ದ ಅಭಯ್​ಗೆ ಕಂಪನಿಯೊಂದರಲ್ಲಿ ಹೂಡಿಕೆ ವಿಚಾರವಾಗಿ ಸಿದ್ದೇಶ್ ಹಣ ನೀಡಿದ್ದ ಎನ್ನಲಾಗಿದೆ.

ವಕೀಲ ರವೀಂದ್ರ ಕುಲಕರ್ಣಿ ಅವರು ಕಾನೂನು ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಹಣ ಹೂಡಿಕೆ ಮಾಡಲು ಉದ್ಯಮಿ ಅಂದ್ರಹಳ್ಳಿಯ ಸಿದ್ದೇಶ್ ಅವರು ನಿರ್ಧರಿಸುತ್ತಾರೆ. ನಂತರ ಹಣ ಹೂಡಿಕೆ ಕುರಿತಾಗಿ ರವೀಂದ್ರ ಕುಲಕರ್ಣಿ ಮೂಲಕ ಮಾತುಕತೆ ನಡೆಸುತ್ತಾರೆ ಉದ್ಯಮಿ ಸಿದ್ದೇಶ್​. ಆಗ ರವೀಂದ್ರ ಅವರು ಬೇಸಿಕ್​ ಚಾರ್ಜಸ್​ ಅಂತ ಸಿದ್ದೇಶ್ ಅವರ ಬಳಿಯಿಂದ 6-7ಲಕ್ಷ ಹಣ ಪಡೆದಿದ್ದರಂತೆ. ಕೊಟ್ಟ ಹಣವನ್ನು ಸಿದ್ಧೇಶ್​ ಅವರು ವಾಪಸ್ ಕೇಳಿದ್ದಾರೆ. ಆದರೆ ರವೀಂದ್ರ ಅವರು ಮಾತ್ರ ಈ ಹಣವನ್ನು ಹಿಂತಿರುಗಿಸದೇ ಇದ್ದಾಗ, ಸಿದ್ದೇಶ್ ಅವರು ಈ ಕಿಡ್ನಾಪ್​ಗೆ ಪ್ಲಾನ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸೆ.20 ರಂದು ಮಾತುಕತೆಗೆ ಎಂದು ಕರೆಯಿಸಿ ನಾಗರಭಾವಿಯ ಹೋಟೆಲ್​ ಬಳಿ ವಕೀಲನನ್ನು ಕಾರಿನಲ್ಲಿ ಅಪಹರಿಸಿದ್ದಾರೆ. ಬಳಿಕ ವಕೀಲನ ಸಹೋದರನಿಗೆ ಕರೆ ಮಾಡಿ 10 ಲಕ್ಷ ರೂ. ತರುವಂತೆ‌ ಧಮಕಿ‌‌ ಹಾಕಿದ್ದಾರೆ. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.‌ವಾಟ್ಸ್​ಆ್ಯಪ್​​ ನಂಬರ್​​ಗೆ ಲೊಕೇಷನ್ ಕಳುಹಿಸಿ ಹಣ ತರುವಂತೆ ಒತ್ತಾಯಿಸಿದ್ದಾರೆ.

ಆರೋಪಿಗಳು ಕರೆ‌ ಮಾಡಿದ ಮಾಹಿತಿ ಆಧರಿಸಿ ಶೋಧ ನಡೆಸಿದ್ದಾಗ ಆಂಧ್ರಹಳ್ಳಿ ಬಳಿಯ ಕಚೇರಿಯಲ್ಲಿ ಅಪಹರಣಕಾರರು ಇರುವುದು ತಿಳಿದುಬಂದಿದೆ. ಈ ಘಟನೆ ಸಂಬಂಧ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...